ಬೆಂಗಳೂರು: ರಾಜ್ಯದಲ್ಲಿ 1987ರಿಂದ 95ರ ಅವಧಿಯಲ್ಲಿ ಪ್ರಾರಂಭಗೊಂಡಿರುವ ಅನುದಾನ ರಹಿತ ಶಾಲಾ-ಕಾಲೇಜುಗಳ ಸಿಬ್ಬಂದಿಗೆ ಜೂನ್ ಒಂದರಿಂದ ಸಂಬಳ ನೀಡುವ ಮಹತ್ವದ ತೀರ್ಮಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಅನುದಾನಕ್ಕೆ ಆಗ್ರಹಿಸಿ ಮಾಜಿ ಸಚಿವ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಬೋಧಕ/ಬೋಧಕೇತರ ಸಿಬ್ಬಂದಿ ಈಚೆಗೆ ಐದು ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ ಹಿನ್ನೆಲೆಯಲ್ಲಿ ಶುಕ್ರವಾರ ಇಲ್ಲಿ ಸಭೆ ಕರೆದು ಚರ್ಚಿಸಿದ ಯಡಿಯೂರಪ್ಪ ಸಂಬಳ ನೀಡಲು ಸಮ್ಮತಿಸಿದ್ದಾರೆ.

ಅನುದಾನ ನೀಡುವುದಕ್ಕೆ ಸದ್ಯ ಅಡ್ಡಿಯಾಗಿರುವ ಆರ್ಥಿಕ ನಿರ್ಬಂಧವನ್ನು ತೆಗೆದು ಹಾಕುವಂತೆ ಹಣಕಾಸು ಇಲಾಖೆಗೆ ಸೂಚಿಸಲಾಗುವುದು. ನಂತರ ಅರ್ಹ ಶಾಲಾ- ಕಾಲೇಜುಗಳನ್ನು ನಿಯಮಾನುಸಾರ ಅನುದಾನ ವ್ಯಾಪ್ತಿಗೆ ಒಳಪಡಿಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದರು ಎಂದು ಹೊರಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಕ್ಸ್ಗ್ರೇಶಿಯಾ ಸೌಲಭ್ಯವನ್ನು ಪ್ರಾಚಾರ್ಯರು, ಮುಖ್ಯೋಪಾಧ್ಯಾಯರಿಗೆ ವಿಸ್ತರಿಸುವುದು, ಅನುದಾನರಹಿತ ಶಾಲಾ- ಕಾಲೇಜುಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕನಿಷ್ಠ ವೇತನ ಕಡ್ಡಾಯಗೊಳಿಸುವುದು, ಬೋಧಕೇತರ ಸಿಬ್ಬಂದಿಯಲ್ಲಿ ಒಬ್ಬ ದ್ವಿತೀಯ ದರ್ಜೆ ಸಹಾಯಕ ಹಾಗೂ ಅಟೆಂಡರ್ ನೇಮಕ, ಸರ್ಕಾರಿ ನೌಕರರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ.ವಿ.ಎಸ್.ಆಚಾರ್ಯ, ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಶಿಕ್ಷಕರ ಕ್ಷೇತ್ರಗಳ ಶಾಸಕರು, ಶಿಕ್ಷಕರ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.