ಶನಿವಾರ, ಫೆಬ್ರವರಿ 27, 2021
19 °C

ಸಿಯಾಚಿನ್: ನೂರಾರು ಪಾಕ್ ಸೈನಿಕರು ಹಿಮಸಮಾಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಯಾಚಿನ್: ನೂರಾರು ಪಾಕ್ ಸೈನಿಕರು ಹಿಮಸಮಾಧಿ

ಇಸ್ಲಾಮಾಬಾದ್ (ಪಿಟಿಐ): ಪ್ರಪಂಚದಲ್ಲೇ ಅತ್ಯಂತ ಕಡಿಮೆ ತಾಪಮಾನ ಇರುವ ಯುದ್ಧಭೂಮಿ ಎಂದೇ ಹೆಸರಾದ ಸಿಯಾಚಿನ್‌ನಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ ನೂರಾರು ಪಾಕ್ ಸೈನಿಕರು ಹಿಮಸಮಾಧಿಯಾಗಿದ್ದು, ಇನ್ನೂ ಹಲವಾರು ಮಂದಿ ಅಪಾಯದಲ್ಲಿ ಸಿಲುಕಿದ್ದಾರೆ.

ಶನಿವಾರ ಬೆಳಿಗ್ಗೆ 6 ಗಂಟೆ ಹೊತ್ತಿಗೆ ಸಿಯಾಚಿನ್‌ನಲ್ಲಿದ್ದ ಪಾಕ್ ಸೈನಿಕರ ಶಿಬಿರದ ಮೇಲೆ ಭಾರಿ ಪ್ರಮಾಣದಲ್ಲಿ ಹಿಮಪಾತವಾಯಿತೆಂದು ಸುದ್ದಿವಾಹಿನಿಗಳು ವರದಿ ಮಾಡಿವೆ.



ಈಗಾಗಲೇ ಹೆಚ್ಚುವರಿ ಪಡೆಗಳನ್ನು  ಘಟನಾ ಸ್ಥಳಕ್ಕೆ ಕಳುಹಿಸಿದ್ದು, ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಮಿಲಿಟರಿ ವಕ್ತಾರರು ತಿಳಿಸಿದ್ದಾರೆ.



ಸುಮಾರು 135ಕ್ಕೂ ಹೆಚ್ಚಿನ ಸೈನಿಕರು ಹಿಮಸಮಾಧಿಯಾಗಿರಬಹುದೆಂದು ಅನಧಿಕೃತ ಮೂಲಗಳು ತಿಳಿಸಿವೆ.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.