ಸಿಲಿಂಡರ್ ಮಿತಿ ಹೆಚ್ಚಳಕ್ಕೆ ಆಗ್ರಹ

7

ಸಿಲಿಂಡರ್ ಮಿತಿ ಹೆಚ್ಚಳಕ್ಕೆ ಆಗ್ರಹ

Published:
Updated:

ನವದೆಹಲಿ (ಪಿಟಿಐ): ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾರ್ಷಿಕ 6ಕ್ಕೆ ಮಿತಿಗೊಳಿಸಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಂಸದ ಜಗದಾಂಬಿಕ ಪಾಲ್ ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಅವರು, ಸರ್ಕಾರದ ನಿರ್ಧಾರದಿಂದ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಕಾಳಸಂತೆಯಲ್ಲಿ ಅಡುಗೆ ಅನಿಲ ಸಿಲಿಂಡರ್‌ಗೆ ಬೇಡಿಕೆ ಹೆಚ್ಚಿದೆ. ಸರ್ಕಾರವು ನಿಗದಿ ಮಾಡಿರುವ ಮೊತ್ತಕ್ಕಿಂತಲೂ ಹೆಚ್ಚಿನ ಬೆಲೆತೆತ್ತು ಸಾಮಾನ್ಯ ಜನರು ಸಿಲಿಂಡರ್ ಖರೀದಿಸಬೇಕಾಗಿದೆ. ಆದ್ದರಿಂದ ಸರ್ಕಾರವು ಸಿಲಿಂಡರ್‌ಗಳ ಮಿತಿಯನ್ನು 6ರಿಂದ 12ಕ್ಕೆ ನಿಗದಿಗೊಳಿಸಬೇಕು ಎಂದು ಕೋರಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry