ಪಣಜಿ (ಐಎಎನ್ಎಸ್): ಗೋವಾದ ಸೀಟು ಹಂಚಿಕೆ ಕುರಿತು ಚರ್ಚಿಸಲು ಕಾಂಗ್ರೆಸ್ ಮತ್ತು ಎನ್ಸಿಪಿಯ ರಾಷ್ಟ್ರೀಯ ಮುಖಂಡರು ನವದೆಹಲಿಯಲ್ಲಿ ಮಂಗಳವಾರ ಸಭೆ ಸೇರಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಮಾಕಾಂತ್ ಖಲಪ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

`ಮಾರ್ಚ್ 3ರಂದು ಚುನಾವಣೆ ನಡೆಯಲಿದ್ದು, ಸೀಟು ಹಂಚಿಕೆ ಕುರಿತ ಎಲ್ಲ ವಿವಾದಗಳನ್ನೂ ಈ ಸಭೆಯಲ್ಲಿ ಬಗೆಹರಿಸಿಕೊಳ್ಳಲಾಗುತ್ತದೆ. ಮುಖ್ಯಮಂತ್ರಿ ದಿಗಂಬರ್ ಕಾಮತ್ ಮತ್ತಿತರರು ಪಾಲ್ಗೊಳ್ಳುವರು~ ಎಂದು ಹೇಳಿದ್ದಾರೆ.

ಎನ್ಸಿಪಿ ಮತ್ತು ಗೋಮಾಂತಕ್ ಪಕ್ಷದ ಬೆಂಬಲದೊಂದಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಚುನಾವಣಾ ಹೊಂದಾಣಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಎನ್ಸಿಪಿ ನಡುವೆ ಜಟಾಪಟಿ ನಡೆಯುತ್ತಿದೆ.

40 ಸದಸ್ಯ ಬಲದ ವಿಧಾನಸಭೆಯಲ್ಲಿ 8 ಕ್ಷೇತ್ರಗಳನ್ನು ತನಗೆ ಬಿಟ್ಟುಕೊಡುವಂತೆ ಎನ್ಸಿಪಿ ಪಟ್ಟು ಹಿಡಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.