ಶುಕ್ರವಾರ, ಜೂನ್ 18, 2021
23 °C

ಸೀತಾಳಯ್ಯ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ನಗರ ಸಮೀಪದ ಮುಳ್ಳಯ್ಯನಗಿರಿಯಲ್ಲಿರುವ ಇತಿಹಾಸ ಪ್ರಸಿದ್ಧ ಸೀತಾಳಯ್ಯ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.ನಾಡಿನ ವಿವಿಧ ಮೂಲೆಗಳಿಂದ ಆಗಮಿಸಿದ್ದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವ ಅಂಗವಾಗಿ ಮೂರು ದಿನಗಳಿಂದ ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿಯ ದೇವಾಲಯಗಳಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು, ಪೂಜಾ ವಿಧಿಗಳೂ ನಡೆದವು.ಮಧ್ಯಾಹ್ನ 12 ಗಂಟೆಗೆ ದೇವರ ಅಡ್ಡೆಗಳ ಮೆರವಣಿಗೆ ಮಾಡಿ, ಬಳಿಕ ಅಲಂಕೃತ ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ, ರಾಜಬೀದಿಯಲ್ಲಿ ದೇಗುಲದ ಸುತ್ತಲೂ ರಥ ಎಳೆದು, ಭಕ್ತರು ಹರಕೆ ಸಲ್ಲಿಸಿದರು. ಮನೆದೇವರಾಗಿ ಹೊಂದಿರುವ ಸುತ್ತಲಿನ ಹಳ್ಳಿಗಳ ಜನತೆ ಬಾಳೆಹಣ್ಣು, ಹೂವುಗಳನ್ನು ರಥದತ್ತ ಎಸೆದು ಭಕ್ತಿ ಪ್ರದರ್ಶಿಸಿದರು.ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಪಂಚಾಯತ್‌ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ್ ಶೆಟ್ಟರ್ ಶಾಸಕ ಸಿ.ಟಿ.ರವಿ ಅವರೊಂದಿಗೆ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ವಿವಿಧ ರಾಜಕೀಯ ಪಕ್ಷಗಳ ಮುಖಂಡರೂ ರಥೋತ್ಸವಕ್ಕೆ ಆಗಮಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.