ಸುಂಟಿಕೊಪ್ಪ ಪ್ರೌಢಶಾಲೆ: ವಿಜ್ಞಾನ ಪ್ರಾತ್ಯಕ್ಷಿಕೆ
ಕುಶಾಲನಗರ: ವಿದ್ಯಾರ್ಥಿಗಳು ಮೂಲವಿಜ್ಞಾನ ವಿಷಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಮಂಡ್ಯ ಜಿಲ್ಲೆಯ ಅರಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಶಿಕ್ಷಕ ಎಂ.ಕೆ.ನಾಗರಾಜ್ ಹೇಳಿದರು.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಮತ್ತು ಮಂಡ್ಯ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ವತಿಯಿಂದ ಈಚೆಗೆ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಡಾ.ಎಚ್.ನರಸಿಂಹಯ್ಯ ಸಜನಿಕ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಳವಳ್ಳಿ ತಾಲ್ಲೂಕಿನ ದೊಡ್ಡಬೂವಳ್ಳಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಆರ್.ಜಿ.ಮಹಾದೇವಸ್ವಾಮಿ ಮಾತನಾಡಿದರು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನ ಶಿಕ್ಷಕಿ ಎಂ.ಎನ್.ಲತಾ ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.