ಗುರುವಾರ , ಜನವರಿ 23, 2020
28 °C

ಸುಖ್‌ರಾಂ ಜಾಮೀನು ಅರ್ಜಿ ವಿಚಾರಣೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): 1993ರ ಟೆಲಿಕಾಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸುಖ್‌ರಾಂ ಮತ್ತು ಇನ್ನಿಬ್ಬರ ಜಾಮೀನು ಅರ್ಜಿ ಸೋಮವಾರ ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ.ಈ ಹಗರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷಗಳ ಶಿಕ್ಷೆಗೆ ಒಳಗಾಗಿರುವ ಸುಖ್‌ರಾಂ ವಿಚಾರಣಾ ನ್ಯಾಯಾಲಯಕ್ಕೆ ಶರಣಾದ ಬಳಿಕ ನ್ಯಾಯಮೂರ್ತಿ ಪಿ. ಸದಾಶಿವನ್ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಜ. 9ರಂದು ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.ಈ ಆರೋಪಿಗಳ ಮಧ್ಯಂತರ ಜಾಮೀನಿನ ಅವಧಿ ಸೋಮವಾರ ಮುಕ್ತಾಯಗೊಳ್ಳಲಿದೆ. ಈ ಪ್ರಕರಣದಲ್ಲಿ ಸಹ ಆರೋಪಿಗಳಾಗಿರುವ ನಿವೃತ್ತ ಐಎಎಸ್ ಅಧಿಕಾರಿ ರಾನು ಘೋಷ್ ಹಾಗೂ ಹೈದರಾಬಾದ್ ಮೂಲದ ಪಿ. ರಾಮ ರಾವ್ ಅವರಿಗೂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

ಪ್ರತಿಕ್ರಿಯಿಸಿ (+)