ಸುಗ್ರೀವಾಜ್ಞೆಗೆ ರಾಜ್ಯಪಾಲರ ನಕಾರ

7

ಸುಗ್ರೀವಾಜ್ಞೆಗೆ ರಾಜ್ಯಪಾಲರ ನಕಾರ

Published:
Updated:

ಬೆಂಗಳೂರು: ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಸಂಸ್ಥೆಯು ಅನುದಾನಕ್ಕೆ ಒಳಪಟ್ಟ ದಿನಾಂಕದಿಂದ ಅನ್ವಯವಾಗುವಂತೆ ಪಿಂಚಣಿ, ನಿವೃತ್ತಿ ಸೌಲಭ್ಯಗಳನ್ನು ನೀಡುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸುವ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ.ಈ ತಿಂಗಳ 3ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಹೊರ­ಡಿಸಲು ತೀರ್ಮಾನಿಸಿ ರಾಜ್ಯಪಾ­ಲ­ರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ರಾಜ್ಯಪಾಲರು ಇದಕ್ಕೆ ಸಹಿ ಹಾಕಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಅನುದಾನಕ್ಕೆ ಒಳಪಟ್ಟ ದಿನಾಂಕದ ಬದಲು, ನೌಕರರು ಸೇವೆಗೆ ಸೇರಿದ ದಿನಾಂಕದಿಂದಲೇ ಅನ್ವಯವಾಗುವಂತೆ ನಿವೃತ್ತಿ ಸೌಲಭ್ಯಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್‌ ಆದೇಶ ಹೊರಡಿ­ಸಿದೆ. ಆ ಪ್ರಕಾರ ಸೌಲಭ್ಯಗಳನ್ನು ನೀಡಿ­ದರೆ ಸರ್ಕಾರಕ್ಕೆ ₨5 ಸಾವಿರ ಕೋಟಿ ಹೊರೆಯಾಗಲಿದೆ.ಇಷ್ಟೊಂದು ಮೊತ್ತ­ವನ್ನು ಭರಿಸಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಸಲು ಹಾಗೂ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ಜಯಚಂದ್ರ ಅವರು ಇತ್ತೀಚೆಗೆ ತಿಳಿಸಿದ್ದರು. ಸರ್ಕಾರದ ವಿರುದ್ಧ 742 ನ್ಯಾಯಾಂಗ ನಿಂದನೆ ಅರ್ಜಿಗಳು ದಾಖಲಾಗಿವೆ. ಈ ವಿಷಯ ತುರ್ತಾಗಿ ಇತ್ಯರ್ಥವಾಗಬೇಕು ಎಂಬ ಕಾರಣಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ತೀರ್ಮಾನಿಸಿತ್ತು.‘ಈ ವಿಷಯ ಪ್ರಮುಖವಾದುದು. ಸುಗ್ರೀವಾಜ್ಞೆ ಬದಲು, ಅಧಿವೇಶನ­ದಲ್ಲಿ ಮಸೂದೆ ಮಂಡಿಸಿ ಸದನದ ಒಪ್ಪಿಗೆ ಪಡೆಯಿರಿ’ ಎಂದು ರಾಜ್ಯ­ಪಾ­ಲರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry