ಭಾನುವಾರ, ಏಪ್ರಿಲ್ 18, 2021
33 °C

ಸುಜಾತಾ ಪಾಟೀಲ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಮನಾಬಾದ್: ತಾಲ್ಲೂಕಿನ ಮಾಣಿಕನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕಾಗಿ ಮಂಗಳವಾರ ನಡೆದ ಚುನಾವಣೆಯಲ್ಲಿ ಸುಜಾತಾ ಅನಿಲಕುಮಾರ ಪಾಟೀಲ ಅವಿರೋಧ ಆಯ್ಕೆಗೊಂಡರು.

ಈ ಹಿಂದೆ ಅಧ್ಯಕ್ಷರಾಗಿದ್ದ ಶಾಲಿವಾಹನ್ ರೂಗನ್ ಅವರು ಅಧಿಕಾರ ಸ್ವೀಕಾರಕ್ಕೂ ಮುನ್ನ ಮಾಡಿಕೊಂಡ ಒಪ್ಪಂದದಂತೆ ಕಳೆದ ಒಂದು ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಅಂಗೀಕಾರಗೊಂಡ ಬಳಿಕ ಜಿಲ್ಲಾಧಿಕಾರಿ ಅವರು ಮಂಗಳವಾರ ಚುನಾವಣೆ ನಡೆಸಲು ಅಧಿಕಾರಿಗಳಿಗೆ ಆದೇಶ ನೀಡಿದ್ದರು. ಆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಆಗಿ ಆಗಮಿಸಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾಜಿ ಡೋಣಿ ಅವರು ಬೆಳಿಗ್ಗೆ 10ರಿಂದ 11ಕ್ಕೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಿದ್ದರು. ಆ ಅವಧಿಯಲ್ಲಿ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆ ಆಗಿತ್ತು. ಮಧ್ಯಾಹ್ನ 1ಕ್ಕೆ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಡೋಣಿ ಅಧ್ಯಕ್ಷ ಸ್ಥಾನಕ್ಕೆ ಬಂದಿರುವ ನಾಮಪತ್ರ ಪರಿಶೀಲಿಸಿದ್ದು, ಕ್ರಮಬದ್ಧ ಇರುವ ಹಿನ್ನೆಲೆಯಲ್ಲಿ ಸುಜಾತಾ ಅನೀಲಕುಮಾರ ಪಾಟೀಲ ಅವರು ಅಧ್ಯಕ್ಷರಾಗಿ ಅವಿರೋಧ ಆಯ್ಕೆಗೊಂಡಿರುವ ಕುರಿತು ಮಾಹಿತಿ ನೀಡಿದರು.

ಸಹಾಯಕ ಚುನಾವಣಾ ಅಧಿಕಾರಿ ಜಯಶ್ರಿ ಹಳ್ಳಿಖೇಡ(ಬಿ), ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭಾಗ್ಯಜ್ಯೋತಿ, ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ ಹಾಗೂ ಸರ್ವ ಸದಸ್ಯರು ಇದ್ದರು. ಪಾಟೀಲ ಅವರು ಅಧ್ಯಕ್ಷರಾಗಿ ಆಯ್ಕೆಗೊಂಡ ಬಗ್ಗೆ ಅಧಿಕೃತ ಘೋಷಣೆ ಆಗುತ್ತಿದ್ದಂತೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿದರು.

ನಿರ್ಗಮಿತ ಅಧ್ಯಕ್ಷ ಶಾಲಿವಾಹನ್ ರೂಗನ್, ಕಾಂಗ್ರೆಸ್ ಮುಖಂಡರಾದ ಅಪ್ಸರಮಿಯ್ಯ, ರಾಜಪ್ಪ ಇಟಗಿ, ಈಶ್ವರ ಕಲ್ಬುರ್ಗಿ, ಮಾಣಿಕರಾವ ವಾಡೇಕರ್, ಅಶೋಕಕುಮಾರ ಪಾಟೀಲ, ಶರಣಪ್ಪ ಪೊಲೀಸ್ ಪಾಟೀಲ, ಶಶಿಕಾಂತ ಗಂಗಸಿರಿ, ಗುರಪ್ಪ ವಿಭೂತಿ, ಬಾಬುರಾವ ಪಡಪಳ್ಳಿ, ನಿಸಾರ ಅಹ್ಮದ್, ಶಂಕರ ಸಂಗಮ್, ಶ್ರೀದೇವಿ ಬಾಬುರಾವ, ಮಾಣಿಕಪ್ಪ ಕುಂದನ್, ಚಂದ್ರಮ್ಮ  ಕುಂಬಾರ ಮೊದಲಾದವರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.