ಮಡಿಕೇರಿ:  ವಿದ್ಯುತ್ ಕಳ್ಳತನವನ್ನು ಪತ್ತೆ ಹಚ್ಚಲು ಹಾಗೂ ತಡೆಗಟ್ಟುವ ಉದ್ದೇಶದಿಂದ ನಗರದ ಸುದರ್ಶನ ವೃತ್ತದ ಸೆಸ್ಕ್ ಕಾಲೋನಿ ಬಳಿ ಸೆಸ್ಕ್ ಜಾಗೃತ ಪೊಲೀಸ್ ಠಾಣೆ ಸ್ಥಾಪಿಸಲಾಗಿದೆ.ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠ ಮಂಜುನಾಥ ಅಣ್ಣಿಗೇರಿ ಅವರು ಈ ಠಾಣೆಯನ್ನು ಉದ್ಘಾಟಿಸಿದರು.

ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ದಿವಾಕರ್ ಸುದ್ದಿಗಾರರ ಜೊತೆ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಸೋರಿಕೆ ಹಾಗೂ ಕಳ್ಳತನವನ್ನು ತಡೆಯುವ ಉದ್ದೇಶದಿಂದ ಈ ಜಾಗೃತ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ ಎಂದರು.

ತಾಂತ್ರಿಕ ಕಾರಣಗಳಿಂದ ವಿದ್ಯುತ್ ಸೋರಿಕೆಯಾಗುತ್ತಿದ್ದರೆ ಅದನ್ನು ಕೂಡ ಪತ್ತೆ ಹಚ್ಚುವ ಕೆಲಸವನ್ನು ಜಾಗೃತ ಪೊಲೀಸರು ಮಾಡುತ್ತಾರೆ. ಬಳಕೆದಾರರು ವಿದ್ಯುತ್ ಕಳ್ಳತನ ಮಾಡುತ್ತಿದ್ದರೆ ಅದನ್ನು ಪತ್ತೆ ಹಚ್ಚಿ, ಕಾನೂನು ಪ್ರಕಾರ ದಂಡ- ಶಿಕ್ಷೆಯನ್ನು ಇವರು ವಿಧಿಸುತ್ತಾರೆ. ಇದರಿಂದ ವಿದ್ಯುತ್ ಸೋರಿಕೆಯನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ವಿದ್ಯುತ್ ಕಳ್ಳತನ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರ ಬಳಿ ಮಾಹಿತಿ ಇದ್ದರೆ ಕಚೇರಿಗೆ ಬಂದು ದೂರು ನೀಡಬಹುದು. ಕಚೇರಿಗೆ ಸದ್ಯದಲ್ಲಿಯೇ ಸ್ಥಿರ ದೂರವಾಣಿ ಸಂಪರ್ಕ ಬರಲಿದ್ದು, ನಂತರ ಈ ಸಂಖ್ಯೆಯನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಸಮಾರಂಭದಲ್ಲಿ ಜಾಗೃತ ದಳದ ಎಸ್ಪಿ ರವಿ ನಾರಾಯಣ, ಕಾರ್ಯಪಾಲಕ ಎಂಜಿನಿಯರ್ ರಾಘವೇಂದ್ರ, ಡಿವೈಎಸ್ಪಿ ನಾಗಪ್ಪ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.