ಶುಕ್ರವಾರ, ಜನವರಿ 24, 2020
17 °C

ಸುನಂದಾ ಕೊಲೆ ಪ್ರಕರಣ ಸಾಬೀತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಸೈನೈಡ್‌ ತಿನ್ನಿಸಿ ಮಹಿಳೆಯರನ್ನು ಕೊಲೆ ಮಾಡುತ್ತಿದ್ದ ಆರೋಪಿ, ಬಂಟ್ವಾಳ ತಾಲ್ಲೂಕಿನ ಕನ್ಯಾನದ ಶಿಕ್ಷಕ ಮೋಹನ ಕುಮಾರ್‌ ವಿರುದ್ಧ ಇನ್ನೊಂದು ಕೊಲೆ ಪ್ರಕರಣ ಸಾಬೀತಾಗಿದೆ. ಮೋಹನ ಸುಳ್ಯ ತಾಲ್ಲೂಕಿನ ಪೆರುವಾಜೆಯ ಸುನಂದಾ (28) ಅವರನ್ನು ಅಪಹರಿಸಿ ಕೊಲೆ ಮಾಡಿರುವುದು ಸಾಬೀತಾಗಿದೆ ಎಂದು ಇಲ್ಲಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಬಿ.ಕೆ.ನಾಯಿಕ ಅವರು ಬುಧವಾರ ಆದೇಶ ನೀಡಿದರು. ಮೋಹನನ ಮೇಲಿರುವ 20 ಕೊಲೆ ಪ್ರಕರಣಗಳ ಪೈಕಿ ಮೂರರಲ್ಲಿ ಆತನಿಗೆ ಶಿಕ್ಷೆ ಆಗುವುದು ಖಚಿತವಾದಂತಾಗಿದೆ.

ಪ್ರತಿಕ್ರಿಯಿಸಿ (+)