ಗುರುವಾರ , ಮೇ 6, 2021
23 °C

ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ರಾಜ್ಯಪಾಲರ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ರಾಜ್ಯದಲ್ಲಿ ನಡೆಸಿದ ಅಕ್ರಮ ಗಣಿಗಾರಿಕೆಗಳ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದ ಕ್ರಮವನ್ನು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಸ್ವಾಗತಿಸಿದ್ದಾರೆ.ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಅವರು, `ಸುಪ್ರೀಂಕೋ  ರ್ಟ್ ನ ಅರಣ್ಯ ಪೀಠವು ರಾಜ್ಯದ ಅಕ್ರಮ ಗಣಿ ತನಿಖೆಯನ್ನು ಸಿಬಿಐಗೆ ವಹಿಸಿದ್ದನ್ನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರು, ಹೇಗೆ ರೆಡ್ಡಿಗಳು ಜಮೀನು ಒತ್ತುವರಿ ಮಾಡಿಕೊಂಡು ಗಣಿಗಾರಿಕೆ ನಡೆಸಿದ್ದರು ಎಂಬುದನ್ನು ವರದಿಯಲ್ಲಿ ವಿವರವಾಗಿ    ಪ್ರಸ್ತಾಪ ಮಾಡಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ನಡೆಯಲಿ~ ಎಂದು ಹೇಳಿದರು.ಲೋಕಾಯುಕ್ತ ವರದಿಯ ಕೆಲ ವಿವರಗಳ ಬಗ್ಗೆ ರಾಜ್ಯ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ ಅವರು ಪ್ರಶ್ನಿಸಿರುವ ಕುರಿತು ರಾಜ್ಯಪಾಲರ ಗಮನ ಸೆಳೆದಾಗ, `ಆಚಾರ್ಯ ಅವರು ಈಗಷ್ಟೇ ಅಡ್ವೊಕೇಟ್ ಜನರಲ್ ಆಗಿ ಅಧಿಕಾರ ವಹಿಸಿ ಕೊಂಡಿದ್ದಾರೆ. ಅಲ್ಲದೇ ಅವರು ಸಲಹೆ ನೀಡುವುದಕ್ಕಷ್ಟೇ ಸೀಮಿತವಾಗಲಿ~ ಎಂದು ತಿಳಿಸಿದರು.`ವರದಿಯಲ್ಲಿ ಮಾಡಲಾದ ಶಿಫಾರಸುಗಳ ಬಗ್ಗೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರೊಂದಿಗೆ ಚರ್ಚೆ ನಡೆಸುತ್ತೇನೆ~ ಎಂದೂ ಅವರು ನುಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.