ಗುರುವಾರ , ಮೇ 13, 2021
44 °C

ಸುಪ್ರೀಂ: ಮೊದಲ ಬಾರಿಗೆ ಇಬ್ಬರು ಮಹಿಳಾ ನ್ಯಾಯಮೂರ್ತಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಒಬ್ಬ ಮಹಿಳೆ ಸೇರಿದಂತೆ ಮೂವರು ನ್ಯಾಯಮೂರ್ತಿಗಳು ಮಂಗಳವಾರ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ಇದೇ ಮೊತ್ತ ಮೊದಲ ಬಾರಿಗೆ ಸುಪ್ರೀಂಕೋರ್ಟಿನಲ್ಲಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ಎರಡಕ್ಕೆ ಏರಿತು.ನ್ಯಾಯಮೂರ್ತಿಗಳಾದ ಸುಧಾಂಶು ಜ್ಯೋತಿ ಮುಖೋಪಾಧ್ಯಾಯ, ರಂಜನಾ ಪ್ರಕಾಶ ದೇಸಾಯಿ, ಜಗದೀಶ ಸಿಂಗ್ ಖೇಹರ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಎಚ್. ಎಸ್. ಕಪಾಡಿಯಾ ಪ್ರಮಾಣ ವಚನ ಬೋಧಿಸಿದರು. ಮೂವರ ಸೇರ್ಪಡೆಯೊಂದಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 26ರಿಂದ 29ಕ್ಕೆ ಏರಿತು.ನ್ಯಾಯಮೂರ್ತಿ ಮುಖೋಪಾಧ್ಯಾಯ ಅವರು ಗುಜರಾತ್ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿದ್ದರೆ, ನ್ಯಾಯಮೂರ್ತಿ ದೇಸಾಯಿ ಅವರು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದರು. ನ್ಯಾಯಮೂರ್ತಿ ಖೇಹರ್ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದರು.ಸುಪ್ರೀಂಕೋರ್ಟಿಗೆ 1989ರಲ್ಲಿ ಮೊದಲ ಮಹಿಳಾ ನ್ಯಾಯಮೂರ್ತಿ ನೇಮಕಗೊಂಡಿದ್ದರೂ, ನ್ಯಾಯಮೂರ್ತಿ ದೇಸಾಯಿ ಅವರ ನೇಮಕದೊಂದಿಗೆ ಒಂದೇ ಪೀಠದಲ್ಲಿ ಇಬ್ಬರು ಮಹಿಳಾ ನ್ಯಾಯಮೂರ್ತಿಗಳು ಇದೇ ಮೊದಲ ಬಾರಿಗೆ ಬಂದಿದ್ದಾರೆ. ಪೀಠದ ಇನ್ನೊಬ್ಬ ಮಹಿಳಾ ನ್ಯಾಯಮೂರ್ತಿ ಗ್ಯಾನ ಸುಧಾ ಮಿಶ್ರಾ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.