ಸೋಮವಾರ, ಮೇ 17, 2021
21 °C

ಸುಭದ್ರ ರಾಷ್ಟ್ರ: ಶಿಕ್ಷಕರ ಪಾತ್ರ ಮುಖ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಕ ಸಮೂಹ ಶ್ರಮಿಸಬೇಕು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಡಾ. ರಂಗರಾಜ ವನದುರ್ಗ ಸಲಹೆ ನೀಡಿದರು.ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸೋಮವಾರ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ  ಮಾತನಾಡಿದರು.ಮಕ್ಕಳನ್ನು ಸುಸಂಸ್ಕೃತವಾಗಿ ಬೆಳೆಸಿ, ಎಲ್ಲ ಕ್ಷೇತ್ರಗಳಲ್ಲೂ ಉತ್ತಮವಾದುದನ್ನೇ ಸಾಧಿಸುವ ಛಲ ಮೂಡಿಸುವ ಜವಾಬ್ದಾರಿ ಶಿಕ್ಷಕರ ಕೈಲಿದೆ. ಸಮಾಜ ಶಿಕ್ಷಕರಿಂದ ಅಮೋಘವಾದುದನ್ನೇ ನಿರೀಕ್ಷಿಸುತ್ತಿದೆ ಎಂದು ಅವರು ತಿಳಿಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಎಚ್. ಬಾಲರಾಜ್ ಮಾತನಾಡಿ, ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ಶಿಕ್ಷಕರು ಮನಃಪೂರ್ವಕ ಶ್ರಮಿಸಬೇಕು ಎಂದು ತಿಳಿಸಿದರು.ಜಿಲ್ಲಾ ವಾರ್ತಾಧಿಕಾರಿ ಎಚ್. ಶ್ರೀನಿವಾಸ್ ಅವರು ಸರ್ವಪಲ್ಲಿ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಇದೇ ಸಂದರ್ಭ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ಎಸ್ಸೆಸ್ಸೆಲ್ಸಿಯಲ್ಲಿ ಶೇ 100 ಫಲಿತಾಂಶ ಪಡೆದ ಪ್ರೌಢಶಾಲೆಗಳಿಗೆ ಅಭಿನಂದನಾ ಪತ್ರ ವಿತರಿಸಲಾಯಿತಲ್ಲದೆ, ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಚಂದ್ರಶೇಖರ್, ಸಿ. ನಿಂಗಪ್ಪ, ಎಂ.ಟಿ. ಮಲ್ಲೇಶ್, ಎನ್. ಚಂದ್ರಶೇಖರ್, ಡಿ. ಪಂಪನಗೌಡ, ಎ.ಕೆ. ರಾಮಣ್ಣ, ಎನ್. ಗುರುಮೂರ್ತಿ, ಕೆ. ಹನುಮಂತಪ್ಪ, ಗುರಪ್ಪ, ಉಪಸ್ಥಿತರಿದ್ದರು.ಡಯಟ್ ಪ್ರಾಚಾರ್ಯ ಎಂ. ಮರಿಮಾದ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ವಿ. ಕೆಂಪರಂಗಯ್ಯ ಸ್ವಾಗತಿಸಿದರು.   ಶ್ರೀನಿವಾಸರೆಡ್ಡಿ ವಂದಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.