ಬುಧವಾರ, ಜೂನ್ 23, 2021
22 °C
ಶ್ರೀರಂಗಪಟ್ಟಣ ಪುರಸಭೆ

ಸುಮಾ ಅಧ್ಯಕ್ಷೆ, ವೆಂಕಟಸ್ವಾಮಿ ಉಪಾಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ಇಲ್ಲಿನ ಪುರಸಭೆ ಅಧ್ಯಕ್ಷರಾಗಿ ಎಂ. ಸುಮಾ ಹಾಗೂ ಉಪಾಧ್ಯಕ್ಷರಾಗಿ ವೆಂಕಟಸ್ವಾಮಿ ಗುರುವಾರ ಅವಿರೋಧವಾಗಿ ಆಯ್ಕೆಯಾದರು.ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ (ಮಹಿಳೆ)ಕ್ಕೆ ಮೀಸಲಾಗಿತ್ತು. ಒಟ್ಟು 23 ಸದಸ್ಯರ ಪೈಕಿ 2ನೇ ವಾರ್ಡ್‌ನ ಜೆಡಿಎಸ್‌ ಸದಸ್ಯೆ ಎಂ.ಸುಮಾ ಮಾತ್ರ ಆ ವರ್ಗಕ್ಕೆ ಸೇರಿದ್ದರಿಂದ ಇತರರು ನಾಮಪತ್ರ ಸಲ್ಲಿಸಲು ಅವಕಾಶ ಇರಲಿಲ್ಲ. ಹಾಗಾಗಿ ಎಂ.ಸುಮಾ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನ ಬಿಸಿಎಂ–ಎ ವರ್ಗಕ್ಕೆ ಮೀಸಲಾಗಿತ್ತು. ಪಕ್ಷೇತರ ಸದಸ್ಯೆ ಅಮೀನಾ ಮತ್ತು ಕಾಂಗ್ರೆಸ್‌ ಸದಸ್ಯ ವೆಂಕಟಸ್ವಾಮಿ ನಾಮಪತ್ರ ಸಲ್ಲಿಸಿದ್ದರು. ಕಡೇ ಗಳಿಗೆಯಲ್ಲಿ ಅಮೀನಾ ತಮ್ಮ ನಾಮಪತ್ರ ವಾಪಸ್‌ ಪಡೆದ ಕಾರಣ ವೆಂಕಟಸ್ವಾಮಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಎಂ.ಮಲ್ಲಿಕಾರ್ಜುನ ತಿಳಿಸಿದರು. ಒಟ್ಟು 23 ಸದಸ್ಯ ಬಲದ ಪುರಸಭೆಯಲ್ಲಿ ಜೆಡಿಎಸ್‌–6, ಕಾಂಗ್ರೆಸ್‌–7, ಪಕ್ಷೇತರ–6, ಬಿಜೆಪಿ–3 ಹಾಗೂ ಒಬ್ಬರು ಬಿಎಸ್ಆರ್‌ ಕಾಂಗ್ರೆಸ್‌ ಸದಸ್ಯರಿದ್ದಾರೆ. ಪಕ್ಷೇತರ ಸದಸ್ಯೆ ಅಮೀನಾ ಪುರಸಭೆಗೆ ಆಯ್ಕೆಯಾದ ಬಳಿಕ ಜೆಡಿಎಸ್‌ ಸೇರಿದ್ದಾರೆ. ಗುರುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಶಾಸಕ ರಮೇಶ ಬಂಡಿಸಿದ್ದೇಗೌಡ ಕೂಡ ಪಾಲ್ಗೊಂಡಿದ್ದರು. ನೂತನ ಅಧ್ಯಕ್ಷೆ, ಉಪಾಧ್ಯಕ್ಷರನ್ನು ಸದಸ್ಯರು ಅಭಿನಂದಿಸಿದರು. ಮಾರ್ಚ್‌ 7, 2013ರಂದು ಪುರಸಭೆಗೆ ಚುನಾವಣೆ ನಡೆದು, ಮಾರ್ಚ್‌ 11ರಂದು ಫಲಿತಾಂಶ ಪ್ರಕಟವಾಗಿತ್ತು.ಮೀಸಲಾತಿ ಗೊಂದಲದ ಕಾರಣ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ  ಒಂದು ವರ್ಷ ಕಾಲ ನೆನಗುದಿಗೆ ಬಿದ್ದಿತ್ತು. ಹಾಗಾಗಿ ಪ್ರಥಮ ಸಭೆ ನಡೆದ ನಂತರ 5 ವರ್ಷಗಳ ಕಾಲ ಪುರಸಭೆ ಅಸ್ತಿತ್ವದಲ್ಲಿರುತ್ತದೆ. ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸದ್ಯ ಯಾವುದೇ ಸಭೆ ನಡೆಸಲು, ಕಾಮಗಾರಿಗೆ ಚಾಲನೆ ನೀಡಲು ಅವಕಾಶ ಇರುವುದಿಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.