ಸುರೇಂದ್ರ ಬಾಬು ಕಸ್ಟಡಿ ವಿಸ್ತರಣೆ

7

ಸುರೇಂದ್ರ ಬಾಬು ಕಸ್ಟಡಿ ವಿಸ್ತರಣೆ

Published:
Updated:

ಬೆಂಗಳೂರು:  ಕಿರುತೆರೆ ನಟಿ ಹೇಮಶ್ರೀ ಕೊಲೆ ಪ್ರಕರಣ ಸಂಬಂಧ ಹೆಬ್ಬಾಳ ಪೊಲೀಸರು ಬಂಧಿಸಿದ್ದ ಸುರೇಂದ್ರ ಬಾಬು ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ಒಂದು ದಿನ ವಿಸ್ತರಿಸಿ ನಗರದ ಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.ಸುರೇಂದ್ರ ಬಾಬು ಪೊಲೀಸ್ ಕಸ್ಟಡಿ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಪೊಲೀಸರು, ಅವರನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆರೋಪಿಯ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ತನಿಖಾಧಿಕಾರಿಗಳು ಇದೇ ವೇಳೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶರು, ಶನಿವಾರದವರೆಗೆ (ಅ.20) ಸುರೇಂದ್ರ ಬಾಬು ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry