ಸೋಮವಾರ, ಮೇ 17, 2021
22 °C

ಸುಲಭ ಕಂತುಗಳಲ್ಲಿ ಗೃಹನಿರ್ಮಾಣ ಸಾಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: ಶಿಕ್ಷಕರ ನಿವೇಶನದ ಕನಸು ನನಸಾಗಿಸಲು ಮತ್ತು ಕೈಗೆಟುಕುವ ದರದಲ್ಲಿ ಸುಲಭ ಕಂತುಗಳ ಸಾಲದಲ್ಲಿ ಮನೆ ನಿರ್ಮಿಸಿಕೊಳ್ಳುವುದಕ್ಕಾಗಿ ಗೃಹ ನಿರ್ಮಾಣ ಸಹಕಾರ ಸಂಘವನ್ನು ಸ್ಥಾಪಿಸಲಾಗಿದೆ. ಶಿಕ್ಷಣ ಇಲಾಖೆಯ ನೌಕರರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ಎಂ.ವಿ.ನಾಗರಾಜು ಸಲಹೆ ಮಾಡಿದರು.ಸ್ಥಳೀಯ ಮುರಳಿ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ತಾಲ್ಲೂಕು ಸರ್ಕಾರಿ, ಅನುದಾನ, ಅನುದಾನ ರಹಿತ ಶಿಕ್ಷಣ ಇಲಾಖಾ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸರ್ವ ಸದಸ್ಯರ ಮಹಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಂಘದ ಅಧ್ಯಕ್ಷ ಟಿ.ನಾರಾಯಣ ಸಂಘದ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಸಹಕಾರಿ ಅಭಿವೃದ್ಧಿ ಅಧಿಕಾರಿ ಮುನಿರಾಜು ಸಂಘದ ನಿಯಮಾವಳಿಯನ್ನು ವಿವರಿಸಿ, ನಿರ್ದೇಶಕರ ಪಟ್ಟಿಯನ್ನು ಬಿಡುಗಡೆಗೊಳಿಸಿದರು.ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಟಿ.ಕೆ. ನರಸೇಗೌಡ, ನೌಕರರ ಸಂಘದ ಅಧ್ಯಕ್ಷ ಕೆ.ಜಿ. ಭೀಮರಾಜು, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಚ್.ಬಿ.ಪ್ರಕಾಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ರಾಜಣ್ಣ, ಮಹಿಳಾ ಘಟಕದ ಅಧ್ಯಕ್ಷೆ ಸರೋಜಮ್ಮ ವೇದಿಕೆಯಲ್ಲಿದ್ದರು. ಗಿರಿಜಾ ಪ್ರರ್ಥಿಸಿ, ಪ್ರೊ.ಎಂ.ವಿಜಯ ವಂದಿಸಿದರು.ಕಾಂಕ್ರೀಟ್ ರಸ್ತೆ ಉದ್ಘಾಟನೆ:

ತಾಲ್ಲೂಕಿನ ಬೂದಿಹಾಳ್ ರಥ ಬೀದಿಗೆ ನೂತನವಾಗಿ ರೂ. 9.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಾಂಕ್ರೀಟ್ ರಸ್ತೆಯನ್ನು ಜಿ.ಪಂ. ಸದಸ್ಯ ಬಿ.ಎಂ.ಎಲ್. ಕೃಷ್ಣಪ್ಪ ಭಾನುವಾರ ಉದ್ಘಾಟಿಸಿದರು. ಗ್ರಾಮದ ತಿಮ್ಮರಾಯಸ್ವಾಮಿ ರಥೋತ್ಸವದ ಹಿನ್ನೆಲೆಯಲ್ಲಿ ಸುಸಜ್ಜಿತವಾದ ಕಾಂಕ್ರೀಟ್ ರಸ್ತೆಯನ್ನು ಜಿ.ಪಂ. ನಿಧಿಯಿಂದ ನಿರ್ಮಿಸಲಾಗಿದೆ ಎಂದರು.  ತಾ.ಪಂ. ಅಧ್ಯಕ್ಷ ಲಕ್ಷ್ಮೀನಾರಾಯಣ, ಗ್ರಾ.ಪಂ. ಮಾಜಿ ಅಧ್ಯಕ್ಷ ತಿಮ್ಮರಾಯಪ್ಪ, ಗ್ರಾಮದ ಮುಖಂಡರಾದ ಬಿ.ಮಾರೇಗೌಡ, ಬಿ.ಟಿ.ರುದ್ರೇಶ್, ಕನ್ನಡ ಸೇನೆಯ ಬೂದಿಹಾಳ್ ರಾಜು ಉಪಸ್ಥಿತರಿದ್ದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.