ಗುರುವಾರ , ಮೇ 13, 2021
34 °C

ಸುಳ್ಯ: ರಬ್ಬರ್ ಟೈರ್ ಉತ್ಪಾದನಾ ಘಟಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡೆಕೋಲು (ದಕ್ಷಿಣ ಕನ್ನಡ): ಮುಖ್ಯಮಂತ್ರಿ ತವರೂರು ಮಂಡೆಕೋಲು ಸಮೀಪದ ಅಜ್ಜಾವರದಲ್ಲಿ ರೂ.500 ಕೋಟಿ ವೆಚ್ಚದಲ್ಲಿ ರಬ್ಬರ್ ಟೈರ್ ಉತ್ಪಾದನಾ ಕಾರ್ಖಾನೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಈ ಸಂಬಂಧ ಮುಖ್ಯಮಂತ್ರಿ ಸದಾನಂದ ಗೌಡ ಅವರು ಸುಳ್ಯ ತಾಲ್ಲೂಕಿನ ಮಂಡೆಕೋಲು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೈಗಾರಿಕಾ ಅಭಿವೃದ್ಧಿ ಇಲಾಖೆ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಹಾಗೂ ಸ್ಥಳೀಯ ಅಧಿಕಾರಿಗಳ ಸಭೆ ನಡೆಸಿದರು.

 

ಕೈಗಾರಿಕಾ ಅಭಿವೃದ್ಧಿ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ರಾಜ್‌ಕುಮಾರ್ ಖತ್ರಿ ವರದಿ ಮಂಡಿಸಿದರು. ಘಟಕಕ್ಕೆ ಕನಿಷ್ಠ 100 ಎಕರೆ ಒದಗಿಸುವಂತೆ, ಪರಿಸರ ಇಲಾಖೆ, ಮಾಲಿನ್ಯ ನಿಯಂತ್ರಣಾ ಮಂಡಳಿಯಿಂದ ಅನುಮತಿ ಪಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎನ್.ಎಸ್.ಚನ್ನಪ್ಪ ಗೌಡ ಅವರಿಗೆ ಸೂಚಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.