ಮಂಗಳವಾರ, ನವೆಂಬರ್ 19, 2019
29 °C

`ಸುಳ್ಳಾಗಲಿದೆ ಸಮೀಕ್ಷೆ'

Published:
Updated:

ಬೆಂಗಳೂರು: `ಉತ್ತಮ ಆಡಳಿತ ನೀಡುವುದು ಹಾಗೂ ಪಕ್ಷದ ಪ್ರಣಾಳಿಕೆಯ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ನಮ್ಮ ಪ್ರಮುಖ ಗುರಿ' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಪಕ್ಷದ ಕಚೇರಿಯಲ್ಲಿ ಶುಕ್ರವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, `ರಾಜ್ಯ ಹಾಗೂ ಕೇಂದ್ರ ಸರ್ಕಾಗಳ ವೈಫಲ್ಯಗಳನ್ನು ಜನರ ಮುಂದಿಟ್ಟು ಮತ ಯಾಚಿಸುತ್ತೇವೆ' ಎಂದರು.ಅಭ್ಯರ್ಥಿಗಳ ಪಟ್ಟಿಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಇನ್ನೆರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿ ಹಾಗೂ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಇದೇ ಭಾನುವಾರ ಪದ್ಮನಾಭನಗರದಲ್ಲಿ ಕಾರ್ಯಕರ್ತರ ಬೃಹತ್ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳು ಹಾಗೂ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದಾಗ ತೆಗೆದ ಚಿತ್ರಗಳನ್ನು ಒಳಗೊಂಡ ಹಳೆಯ ನೆನಪುಗಳ ವಿಡಿಯೊ ಚಿತ್ರಣವನ್ನು ಸಮ್ಮೇಳನದಲ್ಲಿ ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.ರಾಜುಗೌಡ ಸೇರ್ಪಡೆ

ಇದಕ್ಕೂ ಮುನ್ನ ಮಾಜಿ ಸಚಿವ ರಾಜುಗೌಡ ತಮ್ಮ ಹಲವು ಬೆಂಬಲಿಗರೊಂದಿಗೆ ಜೆಡಿಎಸ್‌ಗೆ ಸೇರಿದರು.

ಪ್ರತಿಕ್ರಿಯಿಸಿ (+)