ಬೆಂಗಳೂರು: ಶ್ರೀಮಂತರು ಕೂಡ ಸುಳ್ಳು ಆದಾಯ ಪ್ರಮಾಣಪತ್ರಗಳನ್ನು ಸಲ್ಲಿಸಿ ತಮ್ಮ ಮಕ್ಕಳಿಗೆ `ಶಿಕ್ಷಣ ಹಕ್ಕು ಕಾಯ್ದೆ'ಯ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದಾರೆ ಎಂಬ ಆರೋಪ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಆದೇಶಿಸಿದ್ದಾರೆ.

ರಾಜ್ಯದ ಖಾಸಗಿ ಶಾಲೆಗಳಲ್ಲಿ ಆರ್ಟಿಇ ಕಾಯ್ದೆ ಅಡಿ ಪ್ರವೇಶ ಪಡೆದಿರುವವರಲ್ಲಿ ಶೇ 40ರಷ್ಟು ಮಂದಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಕರ್ನಾಟಕ ಖಾಸಗಿ ಶಾಲೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಲ್.ಆರ್.ಶಿವರಾಮೇಗೌಡ ಹೇಳಿಕೆ ನೀಡಿದ್ದರು. ಈ ಸಂಬಂಧ ಮಾಧ್ಯಮದಲ್ಲಿ ಪ್ರಕಟವಾಗಿದ್ದ ವರದಿ ಆಧರಿಸಿ ಮಂಗಳವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತರು, ತನಿಖೆಗೆ ಆದೇಶ ಹೊರಡಿಸಿದ್ದಾರೆ.

`ಖಾಸಗಿ ಶಾಲೆಗಳಲ್ಲಿ ಆರ್ಟಿಇ ಕಾಯ್ದೆಯ ಅಡಿಯಲ್ಲಿ ನಡೆದಿರುವ ಪ್ರವೇಶ ಪ್ರಕ್ರಿಯೆ ಕುರಿತು ಸಮಗ್ರವಾಗಿ ತನಿಖೆ ನಡೆಸಬೇಕು. ಸಂಬಂಧಿಸಿದ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಬಾಧಿತ ವ್ಯಕ್ತಿಗಳ ಅಹವಾಲು ಆಲಿಸಬೇಕು. ಯಾವುದೇ ಪೋಷಕರು ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿರುವುದು ಪತ್ತೆಯಾಗಿರುವುದು ಖಚಿತವಾದಲ್ಲಿ ಅಂತಹ ಸೀಟುಗಳನ್ನು ಅರ್ಹ, ಬಡ ಮಕ್ಕಳಿಗೆ ನೀಡಬೇಕು' ಎಂದು ಲೋಕಾಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಎಸ್.ಆರ್.ಉಮಾಶಂಕರ್ ಅವರಿಗೆ ತಾಕೀತು ಮಾಡಿದ್ದಾರೆ.

ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿ ಸೀಟು ಪಡೆದಿರುವ ಕುರಿತು ತನಿಖೆ ನಡೆಸಲು ಮತ್ತು ಕ್ರಮ ಜರುಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಆರು ವಾರಗಳ ಕಾಲಾವಕಾಶ ನೀಡಲಾಗಿದೆ. ಅಷ್ಟರೊಳಗೆ ಕ್ರಮ ಜರುಗಿಸಿರುವ ಕುರಿತು ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚನೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.