ಸುಳ್ಳು ದಾಖಲೆ ಸೃಷ್ಟಿ: ಕ್ರಮಕ್ಕೆ ಆಗ್ರಹ

7

ಸುಳ್ಳು ದಾಖಲೆ ಸೃಷ್ಟಿ: ಕ್ರಮಕ್ಕೆ ಆಗ್ರಹ

Published:
Updated:
ಸುಳ್ಳು ದಾಖಲೆ ಸೃಷ್ಟಿ: ಕ್ರಮಕ್ಕೆ ಆಗ್ರಹ

ಕೋಲಾರ: ತಾಲ್ಲೂಕಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಜಮೀನು ನೋಂದಣಿ ಮಾಡುವ ಮೂಲಕ ರೈತರನ್ನು ವಂಚಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರದಲ್ಲಿ ಬುಧವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಮುಖರು ನೋಂದಣಾಧಿಕಾರಿಗೆ ಮನವಿ ಸಲ್ಲಿಸಿದರು.ಕಚೇರಿಯಲ್ಲಿ ಸ್ಥಳೀಯ ನೌಕರರು ಅನೇಕ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಅವರು ಸ್ಥಳೀಯ ವ್ಯಕ್ತಿಗಳ ಜೊತೆ ಸೇರಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ತಾಲ್ಲೂಕಿನ ಜಮೀನುಗಳನ್ನು ನೋಂದಣಿ ಮಾಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಸುಳ್ಳು ದಾಖಲೆ ಸೃಷ್ಟಿಸಿ ತಾಲ್ಲೂಕಿನ ರೈತರಿಗೆ ಮೋಸ ಮಾಡಿರುವ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಕಾನೂನು ಬಾಹಿರ ಕೆಲಸ ಮಾಡುತ್ತಿರುವವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.ಸೇನೆಯ ರಾಜ್ಯ ಘಟಕದ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ಜಿಲ್ಲಾ ಘಟಕದ ಮುಖಂಡರಾದ ಬೈಚೇಗೌಡ, ವಿ.ಎಚ್.ನಾಗರಾಜ್, ಚನ್ನಬಚ್ಚೇಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್‌ಗೌಡ, ಸಂಪಂಗಿರಾಮಯ್ಯ, ಮಂಜುನಾಥ್, ನರಸಿಂಹಪ್ಪ ಇತರರು ಹಾಜರಿದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry