ಶನಿವಾರ, ನವೆಂಬರ್ 16, 2019
22 °C

ಸುಳ್ಳು ಪ್ರಮಾಣಪತ್ರ: ಆಯೋಗಕ್ಕೆ ದೂರು

Published:
Updated:

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಸಲ್ಲಿಸಿರುವ ಉಮೇದುವಾರಿಕೆಯಲ್ಲಿ ನೀಡಿರುವ ಪ್ರಮಾಣಪತ್ರದಲ್ಲಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಹಿಂದೂಸ್ಥಾನ ಸೇನಾದ ಜಿಲ್ಲಾ ಸಂಚಾಲಕ ಶ್ರೀಕಾಂತ್ ಜಿ. ಭಟ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.ಕೆ.ಎಸ್. ಈಶ್ವರಪ್ಪ ತಮ್ಮ ಮೇಲೆ ನಾಲ್ಕು ಪ್ರಕರಣಗಳಿವೆ ಎಂದು ಪ್ರಮಾಣಪತ್ರ ನೀಡಿದ್ದಾರೆ. ಆದರೆ ವಕೀಲ ಶ್ರೀಪಾಲ್ ದಾಖಲಿಸಿರುವ ಸಿ.ಆರ್. ನಂ. 119/2012 ಮತ್ತು ವಕೀಲ ವಿನೋದ್ ಸೆಷನ್ಸ್ ನ್ಯಾಯಾಲಯದಲ್ಲಿ ದಾಖಲಿಸಿರುವ ನಂ. 86/2012 ಪ್ರಕರಣಗಳ ಬಗ್ಗೆ ಉಲ್ಲೇಖಿಸದೆ ಸತ್ಯ ಮರೆಮಾಚಿದ್ದಾರೆ ಎಂದು ಅವರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಪ್ರತಿಕ್ರಿಯಿಸಿ (+)