ಶುಕ್ರವಾರ, ಮೇ 14, 2021
25 °C

ಸುವರ್ಣಗ್ರಾಮ ಯೋಜನೆಗೆ 38 ಗ್ರಾಮಗಳ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಿಂಗಸುಗೂರ(ಮಸ್ಕಿ): ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅನುಷ್ಠಾನಗೊಂಡ ಸುವರ್ಣಗ್ರಾಮ ಯೋಜನೆಯಡಿ ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 38 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.ಈಗಾಗಲೆ 24 ಗ್ರಾಮಗಳಲ್ಲಿ ಸುವರ್ಣಗ್ರಾಮ ಯೋಜನೆ ಕಾಮಗಾರಿಗಳು ಆರಂಭಗೊಂಡಿವೆ ಎಂದು ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.ತಲೆಖಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಡಗಲಿ ಗ್ರಾಮದಲ್ಲಿ 3ನೇ ಹಂತದ ಸುವರ್ಣಗ್ರಾಮ ಯೋಜನೆ ಕಾಮಗಾರಿಗಳಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, 1ನೇ ಹಂತದಲ್ಲಿ 6, 2ನೇ ಹಂತದಲ್ಲಿ 8, 3ನೇ ಹಂತದಲ್ಲಿ 10 ಗ್ರಾಮಗಳ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. 4ನೇ ಹಂತದಲ್ಲಿ ಈಗಾಗಲೆ 14 ಗ್ರಾಮಗಳ ಶಿಫಾರಸು ಆಗಿದ್ದು ಶೀಘ್ರದಲ್ಲಿಯೆ ಕಾಮಗಾರಿ ಆರಂಭಗೊಳ್ಳಲಿವೆ ಎಂದರು.ಹಡಗಲಿ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆಗಳ ಅಭಿವೃದ್ಧಿ ಚರಂಡಿಗಳ ನಿರ್ಮಾಣ, ಸಮುದಾಯ ಭವನ, ಅಂಗನವಾಡಿ ಕೇಂದ್ರಗಳ ನಿರ್ಮಾಣ ಸೇರಿದಂತೆ ಇತರೆ ಕಾಮಗಾರಿಗಳನ್ನು ರೂ. 55 ಲಕ್ಷದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ.ಸಾರ್ವಜನಿಕರು ಗ್ರಾಮದ ಹಿತದೃಷ್ಟಿಯಿಂದ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಲು ಹೆಚ್ಚಿನ ನಿಗಾ ವಹಿಸಬೇಕು. ಕಾಮಗಾರಿ ಗುಣಮಟ್ಟದಲ್ಲಿ ರಾಜಿಮಾಡಿಕೊಳ್ಳಬೇಡಿ. ಸರ್ಕಾರದ ಯೋಜನೆಗಳ ಸದ್ಬಳಕೆಗೆ ಮುಂದಾಗುವಂತೆ ಕೋರಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮ್ಮವ್ವ ಗ್ಯಾನಪ್ಪ ರಾಠೋಡ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ತಿಮ್ಮಣ್ಣ ನಾಯಕ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಹಾದೇವಪ್ಪಗೌಡ ಮಸ್ಕಿ, ಎಚ್.ಬಿ. ಮುರಾರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಅಮರೇಶ ವಿಠಲಾಪುರ, ಶಂಕರ ಪವಾರ, ಹೇಮಣ್ಣ ತಳವಾರ, ಮಹಾಂತಯ್ಯಸ್ವಾಮಿ, ಸಹಾಯಕ ಎಂಜಿನಿಯರ್ ನಾಗೇಂದ್ರ ಪಟ್ಟಣಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.