ಗುರುವಾರ , ಏಪ್ರಿಲ್ 22, 2021
22 °C

ಸುವರ್ಣಭೂಮಿ ಯೋಜನೆ: ಅರ್ಜಿ ಸಲ್ಲಿಸಲು ರೈತರ ನೂಕುನುಗ್ಗಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಳಕಾಲ್ಮುರು: ಸುವರ್ಣಭೂಮಿ ಯೋಜನೆ ಸೌಲಭ್ಯ ಪಡೆಯಲು ಇಲ್ಲಿನ ಕೃಷಿ ಇಲಾಖೆ ಆವರಣದಲ್ಲಿ ಶುಕ್ರವಾರ ಅರ್ಜಿ ಸಲ್ಲಿಕೆಗೆ ನೂಕುನುಗ್ಗಲು ಏರ್ಪಟ್ಟಿತ್ತು.

ನೂತನವಾಗಿ ಸರ್ಕಾರ ಸಣ್ಣ ಹಾಗೂ ಅತಿಸಣ್ಣ ರೈತರ ಭೂಮಿಗಳನ್ನು ಹೆಚ್ಚು ಇಳುವರಿ ಬರುವ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಕೊಳ್ಳಲು ಪೂರ್ವಸಿದ್ಧತೆ ಮಾಡಿಕೊಳ್ಳಲು ಈ ಯೋಜನೆ ಜಾರಿಗೆ ತಂದಿದೆ. ಇದರ ಹೊಣೆ ಕೃಷಿ, ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆಗಳಿಗೆ ನೀಡಲಾಗಿದೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.ತಾಲ್ಲೂಕು ಕೃಷಿ ಅಧಿಕಾರಿ ಡಾ.ಕೆಂಗೇಗೌಡ ಮಾಹಿತಿ ನೀಡಿ ‘ತಾಲ್ಲೂಕು ಕಂದಾಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ತಾಲ್ಲೂಕಿನಲ್ಲಿ ಒಟ್ಟು 12,797 ಸಣ್ಣ ಹಾಗೂ ಅತಿಸಣ್ಣ ರೈತರು ಇದ್ದಾರೆ. ಯೋಜನೆ ಅಡಿಯಲ್ಲಿ ಕೃಷಿ ಇಲಾಖೆಗೆ 860, ತೋಟಗಾರಿಕೆ ಇಲಾಖೆಗೆ 1,392 ಹಾಗೂ ರೇಷ್ಮೆ ಇಲಾಖೆಗೆ 750 ಫಲಾನುಭವಿಗಳ ಗುರಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕೃಷಿಇಲಾಖೆ ಗುರಿ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದರು.ಏ. 13ರಿಂದ ಅರ್ಜಿಗಳನ್ನು ಪಡೆಯಲಾಗುತ್ತಿದೆ. 13ರಂದು 867 ಅರ್ಜಿ ಮತ್ತು 15ರಂದು 1,500 ಅರ್ಜಿಗಳು ಬಂದಿವೆ. ಅರ್ಜಿ ಸಲ್ಲಿಸಲು 25 ಕೊನೆ ದಿನವಾಗಿದೆ. ಅರ್ಜಿ ಜತೆ ಪಹಣಿ ಲಗತ್ತಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದರೂ ಸಹ ಗಾಳಿ ಸುದ್ದಿಗೆ ಬಲಿಯಾಗಿ ರೈತರು ಸರದಿಯಲ್ಲಿ ನಿಂತು ಪಹಣಿ ಪಡೆದು ಲಗತ್ತಿಸುತ್ತಿದ್ದಾರೆ. ಅರ್ಜಿ ಸಲ್ಲಿಕೆ ನಂತರ ಜಿಲ್ಲಾಧಿಕಾರಿ ಸೂಚಿಸುವ ಸ್ಥಳದಲ್ಲಿ  ಡಿಪ್ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದು ಕೆಂಗೇಗೌಡ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.