ಸುವರ್ಣಸೌಧ ಸಿದ್ಧತೆ ಪರಿಶೀಲಿಸಿದ ಸಿಎಂ

7

ಸುವರ್ಣಸೌಧ ಸಿದ್ಧತೆ ಪರಿಶೀಲಿಸಿದ ಸಿಎಂ

Published:
Updated:
ಸುವರ್ಣಸೌಧ ಸಿದ್ಧತೆ ಪರಿಶೀಲಿಸಿದ ಸಿಎಂ

ಬೆಳಗಾವಿ: ರಾಷ್ಟ್ರಪತಿ ಅವರಿಂದ ಇದೇ ತಾ.11ರಂದು ಲೋಕಾರ್ಪಣೆಗೊಳ್ಳಲಿರುವ ಸುವರ್ಣ ವಿಧಾನಸೌಧದಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಭಾನುವಾರ ಪರಿಶೀಲಿಸಿದರು.ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ಬಳಿ ಇರುವ ಕೊಠಡಿಯಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ  ಕುಳಿತುಕೊಳ್ಳುವ ಸ್ಥಳವನ್ನು ಇಬ್ಬರೂ ವೀಕ್ಷಿಸಿದರು. ರಾಷ್ಟ್ರಪತಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿರುವ ಅಸೆಂಬ್ಲಿ ಹಾಲ್‌ನಲ್ಲಿ ಕೈಗೊಂಡಿರುವ ವ್ಯವಸ್ಥೆಯನ್ನು ಮುಖ್ಯಮಂತ್ರಿ ಪರಿಶೀಲಿಸಿದರು.ಸಂಸದರ ಮತ್ತು ಪತ್ರಕರ್ತರ ಆಸನ ಹಾಗೂ ಸಾರ್ವಜನಿಕರ ಆಸನಗಳ (ಪಬ್ಲಿಕ್ ಗ್ಯಾಲರಿ) ವ್ಯವಸ್ಥೆ ಬಗ್ಗೆ ಸಚಿವ ಉದಾಸಿ ಮಾಹಿತಿ ನೀಡಿದರು.ಶಾಸಕರೊಡನೆ ರಾಷ್ಟ್ರಪತಿಗಳು ಭೋಜನ ಮಾಡುವ ಬ್ಯಾಂಕ್ವೆಟ್ ಹಾಲ್‌ಗೆ ತೆರಳಿ, ಊಟದ ವ್ಯವಸ್ಥೆಯ ಬಗ್ಗೆ ವಿಚಾರಿಸಿದರು. ಸುವರ್ಣ ಸೌಧದ ಉದ್ಘಾಟನಾ ಸಮಾರಂಭ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಸಾರ್ವಜನಿಕರಿಗೆ ಹಾಗೂ ಗಣ್ಯರಿಗೆ ಆಸನದ ವ್ಯವಸ್ಥೆ ಕಲ್ಪಿಸುವ ಕುರಿತು ವಿಚಾರ ಮಿನಿಮಯ ಮಾಡಿಕೊಂಡರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಶೆಟ್ಟರ್, `ಸುವರ್ಣ ಸೌಧವು ಉತ್ತರ ಕರ್ನಾಟಕ ಭಾಗಕ್ಕೆ ನೀಡುತ್ತಿರುವ ಬಹುದೊಡ್ಡ ಕೊಡುಗೆಯಾಗಿದೆ. ಸುವರ್ಣ ಸೌಧವನ್ನು ರಾಷ್ಟ್ರಪತಿಯವರು ಉದ್ಘಾಟಿಸಿ, ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಮೂಲಕ ಅಧಿಕೃತವಾಗಿ ಮುದ್ರೆ ಒತ್ತಲಿದ್ದಾರೆ. ಈ ಸಮಾರಂಭದಲ್ಲಿ ಸುಮಾರು ಒಂದು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ~ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ, ಸಂಸದ ಸುರೇಶ ಅಂಗಡಿ, ಶಾಸಕರಾದ ಅಭಯ ಪಾಟೀಲ, ಸಂಜಯ ಪಾಟೀಲ ಹಾಗೂ ಅಧಿಕಾರಿಗಳು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry