ಬುಧವಾರ, ಜನವರಿ 22, 2020
28 °C
ಬೆಳಗಾವಿ ವಿಧಾನಮಂಡಲ ಅಧಿವೇಶನ–2013

ಸುವರ್ಣ ಸೌಧ ಸದ್ವಿನಿಯೋಗ: ವರದಿ ನಂತರ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುವರ್ಣ ಸೌಧ (ಬೆಳಗಾವಿ): ಸುವರ್ಣ ಸೌಧಕ್ಕೆ ಬೆಳಗಾವಿಯ ವಿವಿಧ ಇಲಾಖೆ ಗಳನ್ನು ವರ್ಗಾಯಿಸಿ ಈ ಕಟ್ಟಡವನ್ನು ಸದ್ವಿನಿಯೋಗ ಮಾಡುವ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗು ವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಪರಿಷತ್ತಿಗೆ ತಿಳಿಸಿದರು.ಉತ್ತರ ಕರ್ನಾಟಕದಲ್ಲಿ ಕೃಷಿ ಉತ್ಪಾ ದನೆಯನ್ನು ಹೆಚ್ಚಿಸುವುದಕ್ಕಾಗಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಕಾಂಗ್ರೆಸ್ ನ ವೀರಣ್ಣ ಮತ್ತಿಕಟ್ಟಿ ಕೇಳಿದ ಪ್ರಶ್ನೆಯ ಉಪಪ್ರಶ್ನೆಗೆ ಬುಧವಾರ ಉತ್ತರಿಸಿದ ಮುಖ್ಯಮಂತ್ರಿಗಳು ಸುವರ್ಣ ಸೌಧದ ಸದ್ಬಳಕೆಗೆ ಸಂಬಂಧಿಸಿ ಪರಿಶೀಲನೆ ನಡೆಸಲು ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ, ಈ ಸಮಿತಿಯ ವರದಿ ಬಂದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಪ್ರತಿಕ್ರಿಯಿಸಿ (+)