ಸುಸಜ್ಜಿತ ತಂಗುದಾಣ ನಿರ್ಮಾಣ

7

ಸುಸಜ್ಜಿತ ತಂಗುದಾಣ ನಿರ್ಮಾಣ

Published:
Updated:

ಮಧುಗಿರಿ: ಪಟ್ಟಣದ ಖಾಸಗಿ ಬಸ್ ನಿಲ್ದಾಣವನ್ನು ಪುರಸಭೆ ಆಡಳಿತ ಈಚೆಗೆ ಸುಮಾರು 75 ಲಕ್ಷ ರೂಪಾಯಿ ವೆಚ್ಚ ಮಾಡಿ ನೆಲಕ್ಕೆ ಸಿಮೆಂಟ್ ಕಾಂಕ್ರೀಟ್ ಮಾಡಿ ನವೀಕರಣ ಮಾಡಿತ್ತು.ಕೇವಲ ಸಿಮೆಂಟ್ ಕಾಂಕ್ರೀಟ್‌ಗಾಗಿ ಅಪಾರ ಪ್ರಮಾಣದ ಹಣ ವೆಚ್ಚ ಮಾಡಿ ಪ್ರಯಾಣಿಕರಿಗೆ ತಂಗುದಾಣ, ಶೌಚಾಲಯ ಹಾಗೂ ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಯಾವುದೇ ಮೂಲ ಸೌಲಭ್ಯ ಕಲ್ಪಿಸದಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ   ಪ್ರಕಟವಾಗಿತ್ತು.ಕೂಡಲೇ ಎಚ್ಚೆತ್ತ ಪುರಸಭಾ ಆಡಳಿತ ಎಸ್‌ಎಫ್‌ಸಿ ನಿಧಿಯಲ್ಲಿ ಐದು ಲಕ್ಷ ರೂಪಾಯಿ ವೆಚ್ಚ ಮಾಡಿ ತಂಗುದಾಣ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದರಿಂದ, ಪ್ರಯಾಣಿಕರಿಗೆ ಸುಸಜ್ಜಿತ ತಂಗುದಾಣ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯ ನಿರ್ಮಾಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry