ಮಂಗಳವಾರ, ಏಪ್ರಿಲ್ 20, 2021
31 °C

ಸುಸಜ್ಜಿತ ವಾಣಿಜ್ಯ ಸಂಕೀರ್ಣ ನಿರ್ಮಾಣ: ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಳ್ಳೇಗಾಲ: `ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಮುಡಿಗುಂಡ ರೇಷ್ಮೆ ಗೂಡಿನ ಮಾರುಕಟ್ಟೆ ಎದುರು ಸುಸಜ್ಜಿತ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು~ ಎಂದು ಶಾಸಕ ಜಿ.ಎನ್. ನಂಜುಂಡಸ್ವಾಮಿ ತಿಳಿಸಿದರು.ಪಟ್ಟಣದ ಉಪವಿಭಾಗಾಧಿಕಾರಿಗಳವರ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ವಾಜಪೇಯಿ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.96 ಮನೆಗಳು ಪ್ರಗತಿ ಹಂತದಲ್ಲಿದ್ದು, 414 ಮನೆಗಳ ಕಾಮಗಾರಿ ಇನ್ನೂ ಪ್ರಾರಂಭಗೊಂಡಿಲ್ಲ. ಪಟ್ಟಣದ ಬಸ್ತೀಪುರ ಸಮೀಪ ನಗರಸಭಾ ವ್ಯಾಪ್ತಿಯಲ್ಲಿ 241 ನಿವೇಶನಗಳನ್ನು ಫಲಾನುಭವಿಗಳಿಗೆ ಈಗಾಗಲೇ ವಿತರಿಸಲಾಗಿದೆ. ಆ ಫಲಾನುಭವಿಗಳಿಗೆ ಮನೆಯನ್ನು ನೀಡಲು ಕ್ರಮ ಕೈಗೊಳ್ಳಲು ಶಾಸಕರು ಸೂಚಿಸಿದರು.ಪಟ್ಟಣದ ಹೊರ ವಲಯಗಳಲ್ಲಿ ತಲೆ ಎತ್ತಿರುವ ನೂತನ ಬಡಾವಣೆಗಳಿಗೆ ಸಾಹಿತಿ, ಸಮಾಜ ಸೇವೆ ಮಾಡಿರುವ ಹಾಗೂ ಪ್ರಮುಖ ರಾಜಕೀಯ ವ್ಯಕ್ತಿಗಳ ನಾಮಕರಣಕ್ಕೆ ಕ್ರಮಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.ಉಪವಿಭಾಗಾಧಿಕಾರಿ ಎ.ಬಿ. ಬಸವರಾಜು, ತಹಶೀಲ್ದಾರ್ ಸುರೇಶ್‌ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವಸ್ವಾಮಿ, ನಗರಸಭೆ ಅಧ್ಯಕ್ಷೆ ಮಂಗಳಗೌರಿ, ಪೌರಾಯುಕ್ತ ಬಸವರಾಜು, ಜಿ.ಪಿ.ಶಿವಕುಮಾರ್, ಆನಂದ್ ಇತರರು ಹಾಜರಿದ್ದರು.ಆ.19ಕ್ಕೆ ನಾಟಕ ಪ್ರದರ್ಶನ


ಚಾಮರಾಜನಗರ: ತಾಲ್ಲೂಕಿನ ಆಲೂರು ಶಾಲಾ ಆವರಣದಲ್ಲಿ ಆ. 19ರಂದು ರಾತ್ರಿ 9ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಶ್ವಗುರು ನಾಟ್ಯ ಸಂಘದಿಂದ ರಾಷ್ಟ್ರವೀರ ಎಚ್ಚಮ ನಾಯಕ ಕುರಿತು ನಾಟಕ ಪ್ರದರ್ಶನಗೊಳ್ಳಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.