ಗುರುವಾರ , ಜೂನ್ 17, 2021
29 °C

ಸೂಕ್ತ ಪ್ರಾತಿನಿಧ್ಯ ನೀಡದೆ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ‘ರಾಜ್ಯದಲ್ಲಿ ವೀರಶೈವ ಲಿಂಗಾಯತರಿಗೆ ರಾಜಕೀಯ ಸೇರಿದಂತೆ ಮತ್ತಿತರರ ಕ್ಷೇತ್ರಗಳಲ್ಲಿ ಸೂಕ್ತ ಪ್ರಾತಿನಿಧ್ಯ ನೀಡದೆ ವಂಚಿಸಲಾಗುತ್ತಿದೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು  ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಪಿ.ಮಹದೇವಪ್ಪ ದೂರಿದರು.ನಗರದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ 3 ಕೋಟಿಗೂ ಹೆಚ್ಚು ಸಮುದಾಯದ ಜನರಿದ್ದಾರೆ. ಆದರೆ, ರಾಜಕೀಯವಾಗಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ. ಎಐಸಿಸಿಯಲ್ಲಿಯೂ ಸಮುದಾಯದ ಮುಖಂಡರನ್ನು ಕಡೆಗಣಿಸಲಾಗುತ್ತಿದೆ. ಸಮುದಾಯದ ಅಭ್ಯರ್ಥಿಗಳನ್ನು ಹೀಗೆ ಕಡೆಗಣಿಸಿದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.ಕೊಡಗು ಲೋಕಸಭಾ ಕ್ಷೇತ್ರದಿಂದ ವೀರಶೈವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.