ಶನಿವಾರ, ಜೂನ್ 19, 2021
22 °C

ಸೂಚ್ಯಂಕ: 309 ಅಂಶ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೂಚ್ಯಂಕ: 309 ಅಂಶ ಕುಸಿತ

ಮುಂಬೈ (ಪಿಟಿಐ): ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ಸೋಮವಾರದ ವಹಿವಾಟಿನಲ್ಲಿ 309 ಅಂಶಗಳಷ್ಟು ಕುಸಿತ ಕಂಡಿದ್ದು, ಎರಡು ತಿಂಗಳ ಹಿಂದಿನ ಮಟ್ಟ 17,052 ಅಂಶಗಳಿಗೆ ಇಳಿಕೆಯಾಗಿದೆ.ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವ ಮತ್ತು ವಿದೇಶಿ ಹೂಡಿಕೆದಾರರು ಖರೀದಿಸುವ ಷೇರುಗಳ ಮೇಲೆ ಸರ್ಕಾರ ತೆರಿಗೆ ವಿಧಿಸಲಿದೆ ಎನ್ನುವ ಸಂಗತಿ ಸೂಚ್ಯಂಕ ಕುಸಿಯುವಲ್ಲಿ ಮುಖ್ಯ ಪಾತ್ರ ವಹಿಸಿದವು.ಮಹಾರಾಷ್ಟ್ರ ಸರ್ಕಾರ ಮುದ್ರಾಂಕ ಶುಲ್ಕ ಹೆಚ್ಚಿಸಲಿದೆ ಎನ್ನುವ ಸುದ್ದಿಯಿಂದ ರಿಯಲ್ ಎಸ್ಟೇಟ್ ವಲಯದ ಷೇರು ದರಗಳು ಇಳಿಕೆ ಕಂಡವು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುತ್ತಿರುವ ಕಚ್ಚಾ ತೈಲದ ಬೆಲೆ ಮತ್ತು  ಡಾಲರ್ ಎದುರು ರೂಪಾಯಿ ಅಪಮೌಲ್ಯ ಕೂಡ ವಹಿವಾಟಿನ ಮೇಲೆ ಪರಿಣಾಮ ಬೀರಿ, ಸೂಚ್ಯಂಕವನ್ನು ಎರಡು ತಿಂಗಳ ಹಿಂದಿನ ಮಟ್ಟಕ್ಕೆ ನೂಕಿತು. ರಾಷ್ಟ್ರೀಯ ಷೇರು ಸೂಚ್ಯಂಕ `ನಿಫ್ಟಿ~ ಕೂಡ 94 ಅಂಶಗಳನ್ನು ಕಳೆದುಕೊಂಡು  5,184 ಅಂಶಗಳಿಗೆ ದಿನದ ವಹಿವಾಟು ಕೊನೆಗೊಳಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.