`ಸೂರ್ಯಸಿಟಿ ಕಾಮಗಾರಿ ನಾಲ್ಕು ತಿಂಗಳಲ್ಲಿ ಪೂರ್ಣ'

7

`ಸೂರ್ಯಸಿಟಿ ಕಾಮಗಾರಿ ನಾಲ್ಕು ತಿಂಗಳಲ್ಲಿ ಪೂರ್ಣ'

Published:
Updated:

ಆನೇಕಲ್: `ತಾಲ್ಲೂಕಿನ ಅತ್ತಿಬೆಲೆ ಸಮೀಪ ಜಿಗಳ, ಆದಿಗೊಂಡನಹಳ್ಳಿ, ಯಡವನಹಳ್ಳಿಯ 997 ಎಕರೆ ಪ್ರದೇಶದಲ್ಲಿ ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಾಣವಾಗುತ್ತಿರುವ ಸೂರ್ಯಸಿಟಿ ಮೂರನೇ ಹಂತದ ಕಾಮಗಾರಿ ಇನ್ನು ನಾಲ್ಕು ತಿಂಗಳಲ್ಲಿ ಪೂರ್ಣಗೊಳ್ಳಲಿದೆ' ಎಂದು ಗೃಹ ಮಂಡಳಿಯ ಪ್ರಧಾನ ಎಂಜಿನಿಯರ್ ಗುರುಪ್ರಸಾದ್ ಹೇಳಿದರು.ತಾಲ್ಲೂಕಿನ ಜಿಗಳದ ಗೃಹ ಮಂಡಳಿ ನಿವೇಶನದ ಬಳಿ ಸೂರ್ಯಸಿಟಿ ಯೋಜನೆಯ ಮೂರನೇ ಹಂತದ ಕಾಮಗಾರಿ ಪರಿಶೀಲನೆ ನಡೆಸಿ ಹಾಗೂ ರೈತರಿಗೆ ಚೆಕ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ತರಹದ ರಾಜಿಯನ್ನು ಮಾಡಿಕೊಳ್ಳುವುದಿಲ್ಲ ಎಂದರು.ಸುಸಜ್ಜಿತ ಬಡಾವಣೆಯನ್ನು ನಿರ್ಮಿಸಲಾಗುವುದು ಎಂದೂ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry