ಬುಧವಾರ, ಜೂನ್ 16, 2021
22 °C

ಸೂಲಿಬೆಲೆ ಕಾಲೇಜು: ಹೆಚ್ಚುವರಿ ಕಟ್ಟಡ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೂಲಿಬೆಲೆ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೆಚ್ಚುವರಿಯಾಗಿ 12 ಕೊಠಡಿಗಳ ನಿರ್ಮಾಣಕ್ಕೆ 1.80 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.  ಎನ್.ಬಚ್ಚೇಗೌಡ ತಿಳಿಸಿದರು.

ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನ ನೂತನ ಕಟ್ಟಡ ಸಮರ್ಪಣೆ ಹಾಗೂ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.ಹೊಸಕೋಟೆ ಪಟ್ಟಣದಲ್ಲಿ ಬಾಲಕಿಯರ ಪದವಿ ಕಾಲೇಜಿಗೆ ಆರು ಕೊಠಡಿಗಳ ಬೇಡಿಕೆಯಿದ್ದು, ಇದಕ್ಕಾಗಿ ಒಂದು ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಯೋಜನಾ ಪ್ರಾಧಿಕಾರದ ಅನುದಾನದಲ್ಲಿ 6 ಕೊಠಡಿಗಳ ನಿರ್ಮಾಣ ಮಾಡಿಕೊಡಲಾಗುವುದು ಎಂದು ಹೇಳಿದರು.ಪ್ರಸಕ್ತ ರಾಜ್ಯದಲ್ಲಿ ಪದವಿ ಶಿಕ್ಷಣದ ಪ್ರಮಾಣ ಕೇವಲ ಶೇ 12.5 ರಷ್ಟಿದ್ದು, 2020ಕ್ಕೆ ಶೇ 25ರಷ್ಟು ಹೆಚ್ಚಳವಾಗಬೇಕಿದೆ ಎಂದರು.ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಬಿ.ಸಿ.ಮೈಲಾರಪ್ಪ, `ನಾನು ಮತ್ತು ನನ್ನದು ಎಂಬ ಸ್ವಾರ್ಥ ಬಿಟ್ಟು ಸೇವಾ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಜನ ನಮ್ಮನ್ನು ಗೌರವಿಸುತ್ತಾರೆ~ ಎಂದು ಹೇಳಿದರು.ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ಎನ್.ಗೋಪಾಲ ಗೌಡ, ಕಾಲೇಜಿನ ಪ್ರಾಂಶುಪಾಲ ಪ್ರೊ. ಎನ್.ನಾರಾಯಣ ಸ್ವಾಮಿ, ಸಹಕಾರ ಬ್ಯಾಂಕಿನ ಆಧ್ಯಕ್ಷ ಬಿ.ವಿ.ಸತೀಶ ಗೌಡ, ಮಾಜಿ ಶಾಸಕ ಸೂ.ರಂ.ರಾಮಯ್ಯ, ಕಾಲೇಜು ಶಿಕ್ಷಣ ನಿರ್ದೇಶಕ ಡಾ. ವಿ.ಕಮಲಮ್ಮ, ಜಂಟಿ ನಿರ್ದೆಶಕ ಪ್ರೊ. ಕುಮಾರರಾಜ ಅರಸ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಸಿ.ವೆಂಕಟೇಗೌಡ, ಮಾದರಿ ಬಿತ್ತನೆ ಕೋಠಿ ಉಪ ನಿರ್ದೇಶಕ ಸುಬ್ರಹ್ಮಣ್ಯ, ಹೊಸಕೋಟೆ ಕಾಲೇಜಿನ ಪ್ರಾಂಶುಪಾಲ ಮರಿರಾಜು ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.