ಸೋಮವಾರ, ಮೇ 23, 2022
26 °C

ಸೆಮಿಫೈನಲ್‌ಗೆ ಸೈನಾ, ಕಶ್ಯಪ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಸೈನಾ ನೆಹ್ವಾಲ್ ಮತ್ತು ಪಿ. ಕಶ್ಯಪ್ ಇಲ್ಲಿ ನಡೆಯುತ್ತಿರುವ ಇಂಡೊನೇಷ್ಯಾ ಸೂಪರ್ ಸರಣಿ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪ್ರವೇಶಿಸಿದರು.



ಎರಡು ಬಾರಿಯ ಚಾಂಪಿಯನ್ ಸೈನಾ ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 21-17, 21-23, 21-19 ರಲ್ಲಿ ಚೀನಾದ ಶಿಕ್ಸಿಯಾನ್ ವಾಂಗ್ ಅವರನ್ನು ಮಣಿಸಿದರು. ವಿಶ್ವದ ನಾಲ್ಕನೇ ರ‌್ಯಾಂಕ್‌ನ ಆಟಗಾರ್ತಿಯ ಎದುರು ಸೈನಾಗೆ ಲಭಿಸಿದ ಮೂರನೇ ಗೆಲುವು ಇದು.



ಇದಕ್ಕೂ ಮುನ್ನ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕಶ್ಯಪ್ 21-15, 21-14 ರಲ್ಲಿ ಡೆನ್ಮಾರ್ಕ್‌ನ ಹ್ಯಾನ್ಸ್ ಕ್ರಿಸ್ಟಿಯನ್ ವಿಟಿನಸ್ ವಿರುದ್ಧ ಜಯ ಸಾಧಿಸಿದರು. ಶನಿವಾರ ನಡೆಯುವ ಪಂದ್ಯದಲ್ಲಿ ಅವರು ಇಂಡೊನೇಷ್ಯಾದ ಸಿಮೊನ್ ಸಂಟೋಸೊ ಅವರ ಸವಾಲನ್ನು ಎದುರಿಸುವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.