ಸೆರೆಸಿಕ್ಕ ಸೈಕೊ ಶಂಕರ್

7

ಸೆರೆಸಿಕ್ಕ ಸೈಕೊ ಶಂಕರ್

Published:
Updated:

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಭಾನುವಾರ ಬೆಳಗಿನ ಜಾವ ಸಿನಿಮೀಯ ರೀತಿಯಲ್ಲಿ ತಪ್ಪಿಸಿಕೊಂಡಿದ್ದ `ಸೈಕೊ ಕಿಲ್ಲರ್' ಎಂಬ ಕುಖ್ಯಾತಿಯ ಜೈಶಂಕರ್ ಅಲಿಯಾಸ್ ಶಂಕರ್‌ನನ್ನು ಕೇಂದ್ರ ಅಪರಾಧ ವಿಭಾಗ ಮತ್ತು ನಗರ ಪೊಲೀಸ್ ಸಿಬ್ಬಂದಿ ಶುಕ್ರವಾರ ಕೂಡ್ಲುಗೇಟ್ ಬಳಿ ಬಂಧಿಸಿದ್ದಾರೆ.ಕೊಲೆ, ಅತ್ಯಾಚಾರ ಸೇರಿದಂತೆ 30ಕ್ಕೂ ಹೆಚ್ಚು ಹೇಯ ಅಪರಾಧ ಪ್ರಕರಣಗಳ ಆರೋಪಿಯಾಗಿರುವ ಶಂಕರ್‌ನನ್ನು ಕಾರಾಗೃಹದ ಆರೋಗ್ಯ ವಿಭಾಗದ ಕೊಠಡಿ ಸಂಖ್ಯೆ 26ರಲ್ಲಿ ಇರಿಸಲಾಗಿತ್ತು. ಭಾನುವಾರ ರಾತ್ರಿ ಸುರಿದ ಮಳೆಯಿಂದ ವಿದ್ಯುತ್ ವ್ಯತ್ಯಯ ಉಂಟಾದ ಸಂದರ್ಭದಲ್ಲಿ ಶಂಕರ್‌ ನಕಲಿ ಕೀ ಬಳಸಿ ಬಾಗಿಲು ತೆರೆದು ಉದ್ಯಾನದಲ್ಲಿ ಬಳ್ಳಿ ಹಬ್ಬಿಸಲು ಗೋಡೆಗೆ ಒರಗಿಸಿಟ್ಟಿದ್ದ ಮರದ ಕಂಬದ ಸಹಾಯದಿಂದ 21 ಅಡಿ ಎತ್ತರದ ಗೋಡೆ ಏರಿ ಪರಾರಿಯಾಗಿದ್ದ.ಬಿಗಿ ಭದ್ರತೆಯ ಈ ಜೈಲಿನ 16 ವರ್ಷಗಳ ಇತಿಹಾಸದಲ್ಲಿ ಕೈದಿಯೊಬ್ಬ ತಪ್ಪಿಸಿಕೊಂಡಿದ್ದ ಇದೇ ಮೊದಲು. ಇದರಿಂದ ತೀವ್ರ ಮುಜುಗರಕ್ಕೆ ಒಳಗಾದ ಕಾರಾಗೃಹ ಇಲಾಖೆ, ಕರ್ತವ್ಯ ಲೋಪಕ್ಕಾಗಿ 11 ಸಿಬ್ಬಂದಿಯನ್ನು ಅಮಾನತು ಮಾಡಿತ್ತು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry