ಗುರುವಾರ , ಏಪ್ರಿಲ್ 22, 2021
31 °C

ಸೆಹ್ವಾಗ್‌ಗೆ 100 ಚಿನ್ನದ ನಾಣ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ನೂರು ಟೆಸ್ಟ್ ಪಂದ್ಯಗಳನ್ನು ಆಡಿದ ವೀರೇಂದ್ರ ಸೆಹ್ವಾಗ್ ಅವರನ್ನು ದೆಹಲಿ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) 100 ಚಿನ್ನದ ನಾಣ್ಯಗಳನ್ನು ನೀಡಿ ಗೌರವಿಸಲು ನಿರ್ಧರಿಸಿದೆ.

ಅಷ್ಟು ಮಾತ್ರವಲ್ಲದೆ, ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದ ಒಂದು ದ್ವಾರಕ್ಕೆ ಸೆಹ್ವಾಗ್ ಹೆಸರನ್ನಿಡಲು ನಿರ್ಧರಿಸಲಾಗಿದೆ. ಇಂಗ್ಲೆಂಡ್ ವಿರುದ್ಧ ಮುಂಬೈನಲ್ಲಿ ನಡೆದ ಎರಡನೇ ಟೆಸ್ಟ್ ಸೆಹ್ವಾಗ್‌ಗೆ 100ನೇ ಟೆಸ್ಟ್ ಆಗಿತ್ತು.

ಡಿಡಿಸಿಎ ಉಪಾಧ್ಯಕ್ಷ ಚೇತನ್ ಚೌಹಾಣ್ ಈ ಪ್ರಸ್ತಾಪಗಳನ್ನು ಮುಂದಿಟ್ಟಿದ್ದರು. ಮಂಗಳವಾರ ಡಿಡಿಸಿಎ ಕಾರ್ಯಕಾರಿ ಮಂಡಳಿ ಇದಕ್ಕೆ ಒಪ್ಪಿಗೆ ನೀಡಿದೆ. ಪ್ರತಿ ಚಿನ್ನದ ನಾಣ್ಯ ಹತ್ತು ಗ್ರಾಂ ಚಿನ್ನವನ್ನು ಒಳಗೊಂಡಿರುತ್ತದೆ. ಜನವರಿ 6 ರಂದು ಫಿರೋಜ್ ಷಾ ಕ್ರೀಡಾಂಗಣದಲ್ಲಿ ನಡೆಯುವ ಪಾಕಿಸ್ತಾನ ವಿರುದ್ಧದ ಏಕದಿನ ಪಂದ್ಯದ ವೇಳೆ ಸೆಹ್ವಾಗ್ ಅವರನ್ನು ಗೌರವಿಸಲಾಗುವುದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.