ಸೆ.16ರಿಂದ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟ

7

ಸೆ.16ರಿಂದ ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟ

Published:
Updated:

ವಿಜಯಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ದಸರಾ ಹಾಗೂ ಮಹಿಳಾ ಕ್ರೀಡಾಕೂಟಗಳನ್ನು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸೆ.16 ಮತ್ತು 17ರಂದು ಹಮ್ಮಿಕೊಳ್ಳಲಾಗಿದೆ.ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಜಿಮ್ನಾಸ್ಟಿಕ್, ಬ್ಯಾಸ್ಕೆಟ್ ಬಾಲ್, ಟೆನ್ನಿಸ್, ಬಾಲ್ ಬ್ಯಾಡ್ಮಿಟನ್, ಕೊಕ್ಕೋ ಕ್ರೀಡೆಗಳನ್ನು ಕಂಠೀರವ ಕ್ರೀಡಾಂಗಣದಲ್ಲಿ, ಹಾಕಿ ಕ್ರೀಡೆಯನ್ನು ಅಕ್ಕಿತಿಮ್ಮನಹಳ್ಳಿ ಹಾಕಿ ಕ್ರೀಡಾಂಗಣದಲ್ಲಿ, ಟೇಬಲ್ ಟೆನ್ನಿಸ್ ಮತ್ತು ಷಟಲ್ ಬ್ಯಾಡ್ಮಿಟನ್ ಯವನಿಕಾದಲ್ಲಿ, ಫುಟ್‌ಬಾಲ್ ಕ್ರೀಡೆಯನ್ನು ಆಸ್ಟಿಂಗ್ ಟೌನ್ ಕ್ರೀಡಾಂಗಣದಲ್ಲಿ, ಹ್ಯಾಂಡ್ ಬಾಲ್ ಪಂದ್ಯವನ್ನು ಜೆ.ಪಿ.ನಗರದ ಕ್ರೀಡಾಂಗಣದಲ್ಲಿ , ಈಜು ಬಸವನಗುಡಿ ಈಜುಕೊಳದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಕ್ರೀಡೆಗಳಲ್ಲಿ ಭಾಗವಹಿಸುವವರು ಬೆಂ.ಗ್ರಾ.ಜಿಲ್ಲೆಯ 4 ತಾಲ್ಲೂಕುಗಳಲ್ಲಿ ನಡೆಸಲಾದ ತಾಲ್ಲೂಕು ಮಟ್ಟದ ದಸರಾ ಹಾಗೂ ಮಹಿಳಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ  ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು. ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಆಯ್ಕೆಯಾದ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ.ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳನ್ನು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಕಳುಹಿಸಿ ಕೊಡಲಾಗುವುದು.ಮಹಿಳಾ ಕ್ರೀಡಾಕೂಟವನ್ನು ಪಂಚಾಯತ್ ರಾಜ್ ಯುವ ಔರ್ ಖೇಲ್ ಅಭಿಯಾನ್ (ಪೈಕಾ) ಯೋಜನೆಯಡಿ ಪ್ರತ್ಯೇಕವಾಗಿ ಮಹಿಳೆಯರಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ಈ ಮಹಿಳಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದವರನ್ನು ರಾಜ್ಯದ ವಿವಿಧ ಸ್ಥಳದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪೈಕಾ ಮಹಿಳಾ ಕ್ರೀಡಾಕೂಟದಲ್ಲಿ ಭಾಗವಹಿಸಿಲು ಕಳುಹಿಸಿಕೊಡಲಾಗುವುದುದೆಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry