ಶುಕ್ರವಾರ, ಜೂನ್ 25, 2021
28 °C

ಸೇತುವೆ ಕುಸಿದು 6 ಜನರ ದುರ್ಮರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೇತುವೆ ಕುಸಿದು 6 ಜನರ ದುರ್ಮರಣ

ಡೆಹ್ರಾಡೂನ್ (ಪಿಟಿಐ): ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದ ಪರಿಣಾಮ ಆರು ಜನ ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಭಾನುವಾರ ಜರುಗಿದೆ.ಅಲಕಾನಂದ ನದಿಗೆ ಅಡ್ಡವಾಗಿ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿತ್ತು. ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅದು ಕುಸಿದಿದೆ.ಆದರೆ ಯಾವ ಕಾರಣಕ್ಕೆ ಸೇತುವೆ ಕುಸಿದಿದೆ ಎಂಬುದು ತಿಳಿದು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಸಿ.ಉಪ್ರೇತಿ ತಿಳಿಸಿದ್ದಾರೆ. ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, 6 ಮೃತದೇಹಗಳನ್ನು ಹೊರ ತೆಗೆಯಲಾಗಿದೆ.ಮುಖ್ಯಮಂತ್ರಿ ವಿಜಯ ಬಹುಗುಣ ಘಟನೆಯ ತನಿಖೆಗೆ ಆದೇಶಿಸಿದ್ದಾರೆ.ರಾಜ್ಯದಲ್ಲಿ ಇಂತಹ ಅವಘಡಗಳು ಕೆಲ ವರ್ಷಗಳಿಂದ ಜರುಗುತ್ತಲೇ ಇವೆ. ಕಳಪೆ ದರ್ಜೆಯ ಸಾಮಗ್ರಿ ಬಳಕೆಯೇ ಇದಕ್ಕೆ ಕಾರಣ ಎನ್ನುವ ದೂರುಗಳು ಕೇಳಿ ಬಂದಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.