ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

7

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

Published:
Updated:

ತುಮಕೂರು: ನಗರದ ಅಗ್ನಿಶಾಮಕ ಠಾಣೆ ಮುಂಭಾಗದಿಂದ ಸಿದ್ದಗಂಗಾ ಆಯಿಲ್ ಮಿಲ್‌ವರೆಗೆ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಮೇಲುಸೇತುವೆ ನಿರ್ಮಿಸಬೇಕೆಂದು ಆಗ್ರಹಿಸಿ ಜಯಕರ್ನಾಟಕ ಸಂಘಟನೆ ಮತ್ತು ವಿನಾಯಕ ಬಳಗದ ಕಾರ್ಯಕರ್ತರು ಹಾಗೂ ಸುತ್ತಲಿನ ನಿವಾಸಿಗಳು ಭಾನುವಾರ ರಸ್ತೆ ಬದಿಯಲ್ಲಿ ಪ್ರತಿಭಟನೆ ನಡೆಸಿದರು.ಹೆದ್ದಾರಿ 2 ಬದಿ ಬಡಾವಣೆಗಳಿವೆ. ರಸ್ತೆ ದಾಟುವ ಸಂದರ್ಭ ಅಪಘಾತ ಸಂಭವಿಸುತ್ತಿವೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಸೂಕ್ರ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರಸ್ತೆ ತಡೆ ನಡೆಸಲು ಪೊಲೀಸರು ಪ್ರತಿಭಟನಾಕಾರರಿಗೆ ಅವಕಾಶ ನೀಡಲಿಲ್ಲ. ಕೆಲ ಕಾಲ ರಸ್ತೆ ಬದಿಯಲ್ಲಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು.ಈ ಭಾಗದಲ್ಲಿ ರಸ್ತೆ ದಾಟಲು ಅನುಕೂಲವಾಗುವಂತೆ ಸೇತುವೆ ನಿರ್ಮಿಸುವಂತೆ ಹೆದ್ದಾರಿ ಪ್ರಾಧಿಕಾರಕ್ಕೆ ಕೋರಲಾಗಿದೆ ಎಂದು ಪೊಲೀಸರು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಪ್ರತಿಭಟನೆಯಲ್ಲಿ ಮುಖಂಡರಾದ ನಾಗೇಂದ್ರ, ರಾಕೇಶ್, ಮಣಿ. ಲೋಕಮ್ಮ, ಬಾಬು ಕೃಷ್ಣಮೂರ್ತಿ ಮುಂತಾದವರು ಭಾಗವಹಿಸಿದ್ದರು.ತಿಪಟೂರು ಬಂದ್ ಇಂದು


ತುಮಕೂರು: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಅ. 1ರಂದು ಜಿಲ್ಲಾ ಮಾದಿಗ- ಛಲವಾದಿ ಸಂಘಟನೆ ವತಿಯಿಂದ ತಿಪಟೂರು ಬಂದ್‌ಗೆ ಕರೆ ನೀಡಲಾಗಿದೆ ಎಂದು ಬಂದಕುಂಟೆ ನಾಗರಾಜಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry