ಮಂಗಳವಾರ, ಏಪ್ರಿಲ್ 20, 2021
30 °C

ಸೇನಾ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ನ್ಯಾಶನಲ್ ಇಂಡಿಯನ್ ಮಿಲಿಟರಿ ಶಾಲೆಯಲ್ಲಿ 8ನೇ ತರಗತಿಗೆ ಪ್ರವೇಶಕ್ಕಾಗಿ ಡಿ. 1 ಮತ್ತು 2 ರಂದು ಬೆಂಗಳೂರಿನಲ್ಲಿ ಪರೀಕ್ಷೆ ನಡೆಯಲಿದ್ದು,  ಅರ್ಜಿ ಆಹ್ವಾನಿಸಲಾಗಿದೆ.7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ 13 ವರ್ಷದೊಳಗಿರುವ ಬಾಲಕರು ಈ ಪರೀಕ್ಷೆಗೆ ಅರ್ಹರಾಗಿರುತ್ತಾರೆ.ಅರ್ಜಿ ನಮೂನೆಯನ್ನು `ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರಿಯಪ್ಪ ಭವನ, 58 ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ರಸ್ತೆ, ಬೆಂಗಳೂರು ಇಲ್ಲಿಂದ ಪಡೆಯಬಹುದು.ಸೈನಿಕ ವೆಲ್‌ಫೇರ್ ಫಂಡ್ ಅಕೌಂಟ್, ಬೆಂಗಳೂರು - ಇವರ ಹೆಸರಿನಲ್ಲಿ ಸಾಮಾನ್ಯ ಅಭ್ಯರ್ಥಿಗಳು 400 ರೂಪಾಯಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 355 ರೂಪಾಯಿ ಡಿ.ಡಿ ಕಳುಹಿಸಿ ಅಥವಾ ಖುದ್ದಾಗಿ ಪಡೆಯಬಹುದು.ಭರ್ತಿ ಮಾಡಿದ ಅರ್ಜಿಗಳನ್ನು ಮತ್ತು ಅದರ ಅಗತ್ಯ ಅಡಕಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ಸೆಪ್ಟೆಂಬರ್ 30 ರೊಳಗೆ ಕಳುಹಿಸಬೇಕು.ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು. ದೂರವಾಣಿ ಸಂಖ್ಯೆ 080-25589459ಕ್ಕೆ ಸಂಪರ್ಕಿಸಬೇಕು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.