ಶನಿವಾರ, ಮೇ 28, 2022
25 °C

ಸೇವಾನಿರತ ವೈದ್ಯರ ಭರ್ತಿ: ಕೌನ್ಸೆಲಿಂಗ್‌ಗೆ ಕೋರ್ಟ್ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸೇವೆಯಲ್ಲಿರುವ ವೈದ್ಯರು ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಲು ಶುಕ್ರವಾರ ನಡೆಯಬೇಕಿದ್ದ ಕೌನ್ಸೆಲಿಂಗ್‌ಗೆ ತಡೆ ನೀಡಿರುವ ಹೈಕೋರ್ಟ್, ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಆದೇಶಿಸಿದೆ.`ಕೋರ್ಟ್‌ನ ಮುಂದಿನ ಆದೇಶದವರೆಗೆ ಈ `ಸೇವಾನಿರತ~ ಕೋಟಾದ ಕೌನ್ಸೆಲಿಂಗನ್ನು ಅಮಾನತಿನಲ್ಲಿಡಬೇಕು~ ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ತಿಳಿಸಿದೆ.ಜೂನ್ 15ರ ಒಳಗೆ ಸಂಪೂರ್ಣ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸುವಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಏಕಸದಸ್ಯಪೀಠ ಪೀಠ ಆದೇಶಿಸಿರುವುದನ್ನು ಪ್ರಶ್ನಿಸಿ ಹಲವರು  ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ನಡೆಸುತ್ತಿದ್ದಾರೆ.ಸೇವಾ ನಿರತ ವೈದ್ಯರಿಗೆ ಸಂಬಂಧಿಸಿದಂತೆ ನಿಗದಿಯಾಗಿರುವ ಕೌನ್ಸೆಲಿಂಗ್ ರದ್ದು ಮಾಡುವಂತೆ ಕೋರಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯಪೀಠವು ಕಳೆದ ವಾರ ವಜಾಗೊಳಿಸಿತ್ತು. ಕೌನ್ಸೆಲಿಂಗ್ ನಡೆಸುವಂತೆ ಆದೇಶಿಸಿತ್ತು.ಸ್ನಾತಕೋತ್ತರ ಪ್ರವೇಶ ಪರೀಕ್ಷೆ  (ಪಿಜಿಸಿಇಟಿ) ತೆಗೆದುಕೊಳ್ಳುವ ಅಭ್ಯರ್ಥಿಗಳು ಮುಂಚಿತವಾಗಿ ಕನಿಷ್ಠ 6 ವರ್ಷಗಳ ಕಾಲ ಯಾವುದಾದರೂ ಸಂಸ್ಥೆಗಳಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುವುದು ಕಡ್ಡಾಯವಾಗಿತ್ತು. ಆದರೆ 2002ರಲ್ಲಿ ಸರ್ಕಾರ ನಿಯಮಕ್ಕೆ ತಿದ್ದುಪಡಿ ಮಾಡಿ ಈ ಸೇವಾ ಅವಧಿ ರದ್ದು ಮಾಡಿದೆ. ಈ ನಿಯಮದ ಆಧಾರದ ಮೇಲೆ ಈಗ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

 

`ತಿದ್ದುಪಡಿಯಿಂದಾಗಿ ಯಾವುದೇ ಅರ್ಹತೆ ಹಾಗೂ ಅನುಭವ ಇಲ್ಲದವರೂ ಪರೀಕ್ಷೆಗೆ ಕುಳಿತುಕೊಳ್ಳಬಹುದಾಗಿದೆ. ಇದರಿಂದ ಹಲವಾರು ವರ್ಷ ಸೇವೆ ಸಲ್ಲಿಸಿರುವ ನಮ್ಮಂಥವರಿಗೆ ಅನ್ಯಾಯ ಆಗಿದೆ. ಇದು ಸರಿಯಲ್ಲ. ಈ ಪರೀಕ್ಷೆ ನಂತರ ಕೌನ್ಸೆಲಿಂಗ್ ಕೂಡ ನಡೆಯುವುದು ಕಾನೂನುಬಾಹಿರ~ ಎನ್ನುವುದು ವಿದ್ಯಾರ್ಥಿಗಳ ದೂರು.  ವಿವಾದ ಕುರಿತಂತೆ ಸರ್ಕಾರ, ವಿಶ್ವವಿದ್ಯಾಲಯ ಸೇರಿ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿರುವ ಪೀಠ, ವಿಚಾರಣೆ ಮುಂದೂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.