ಶನಿವಾರ, ಜೂನ್ 19, 2021
23 °C

ಸೇವಾ ಕಾಯ್ದೆ ಕಾರ್ಯಗತಗೊಳಿಸಲು ಜಾಗೃತರಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಏಪ್ರಿಲ್ 1ರಿಂದ ಜಾರಿಗೊಳಿಸಲು ಉದ್ದೇಶಿಸಿರುವ ನಾಗರಿಕ ಸೇವೆಗಳ ಖಾತರಿ ಕಾಯ್ದೆಯನ್ನು ಕಾರ್ಯಗತಗೊಳಿಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್ ಹೇಳಿದರು.ಮೈಸೂರು ಆಡಳಿತ ತರಬೇತಿ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿ ಸಹಯೋಗದಲ್ಲಿ ನಗರದ ಕೋಟೆ ವಿಧಾನ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ನಾಗರಿಕ ಸೇವಾ ಖಾತರಿ ಅಧಿನಿಯಮ ಅನುಷ್ಠಾನದ ಬಗ್ಗೆ ಇಲಾಖೆ ಅಧಿಕಾರಿಗಳಿಗಾಗಿ ಸೋಮವಾರ ಆಯೋಜಿಸಿದ್ದ ಸಾಮರ್ಥ್ಯಾಭಿವೃದ್ಧಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಸರ್ಕಾರದ ಸೌಲಭ್ಯಗಳು ಹಾಗೂ ಅಗತ್ಯ ಪ್ರಮಾಣ ಪತ್ರಗಳನ್ನು ಕಾಲಮಿತಿಯೊಳಗೆ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಈ ಕಾಯ್ದೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಸೇವೆ ಒದಗಿಸುವಂತಾಗಬೇಕು ಎಂದರು.      

 

ಸಾರ್ವಜನಿಕರಿಂದ ಅರ್ಜಿ ಬಂದ ತಕ್ಷಣ ಇತ್ಯರ್ಥಪಡಿಸಲು ಅಧಿಕಾರಿ ಮತ್ತು ಸಿಬ್ಬಂದಿ ಯತ್ನಿಸಬೇಕು. ಕಾಲಮಿತಿಯೊಳಗೆ ಸಂಬಂಧಿಸಿದ ಅರ್ಜಿಗಳನ್ನು ಇತ್ಯರ್ಥಪಡಿಸಬೇಕು ಎಂದರು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಕೃಷ್ಣಪ್ಪ ಮಾತನಾಡಿ, ಸರ್ಕಾರಿ ನೌಕರರು ಕರ್ತವ್ಯಶೀಲತೆ ಮತ್ತು ಪ್ರಾಮಾಣಿಕತೆ ಮೈಗೂಡಿಸಿಕೊಂಡಾಗ ಸಾರ್ವಜನಿಕರಿಗೆ ಕಾಲಮಿತಿಯೊಳಗೆ ಸೇವೆ ಒದಗಿಸಲು ಸಾಧ್ಯ ಎಂದರು.ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಚಂದ್ರೇಗೌಡ ಮಾತನಾಡಿ, ನಾಗರಿಕ ಸೇವಾ ಕಾಯ್ದೆಯಡಿ ಬರುವ ಎ್ಲ್ಲಲ ಮಾಹಿತಿಗಳನ್ನು ಒಳಗೊಂಡ ನಾಮಫಲಕವನ್ನು ತಮ್ಮ ಕಚೇರಿಗಳಲ್ಲಿ ಅಳವಡಿಸಿ, ಕಾಲಮಿತಿಯೊಳಗೆ ಪಾರದರ್ಶಕ ಸೇವೆ ಒದಗಿಸಬೇಕು ಎಂದರು.ಮೈಸೂರು ಆಡಳಿತ ತರಬೇತಿ ಸಂಸ್ಥೆಯ ತರಬೇತುದಾರ ದಿವಾಕರ್, ಎ.ಟಿ.ಐ. ತರಬೇತಿ ಮೇಲ್ವಿಚಾರಕ  ಪ್ರಸಾದ್, ಜಿ.ಪಂ. ಉಪ ಕಾರ್ಯದರ್ಶಿ ಎಸ್.ವೈ.ಬಸವರಾಜು, ಹಿರಿಯ ಉಪ ವಿಭಾಗಾಧಿಕಾರಿ ಡಾ.ಎಂ.ಆರ್.ರವಿ, ಡಿ.ವೈಎಸ್‌ಪಿಗಳಾದ ಜೆ.ಡಿ.ಪ್ರಕಾಶ್, ಅಣ್ಣಪ್ಪ ನಾಯಕ್, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಮಹಮ್ಮದ್ ಹಬೀಬುಲ್ಲಾ ಖಾನ್, ಜಿ.ಪಂ.ಮುಖ್ಯ ಯೋಜನಾಧಿಕಾರಿ ಶ್ರಿನಿವಾಸ ರಾವ್ ಇತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.