ಶುಕ್ರವಾರ, ಮೇ 14, 2021
21 °C

ಸೇವಾ ಚಟುವಟಿಕೆ ಮತ್ತಷ್ಟು ಹೆಚ್ಚಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭದ್ರಾವತಿ: ಪ್ರತಿಯೊಬ್ಬರು ತಮ್ಮ ಸಂಪಾದನೆಯಲ್ಲಿ ಒಂದಿಷ್ಟು ಭಾಗವನ್ನು ಸಮಾಜ ಸೇವಾ ಚಟುವಟಿಕೆಗೆ ವಿನಿಯೋಗ ಮಾಡುವ ಮನಸ್ಸು ಬೆಳೆಸಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.ಇಲ್ಲಿನ ವೀರಶೈವ ಸಭಾ ಭವನದಲ್ಲಿ ಶನಿವಾರ ಆನಂದ ಸ್ವಯಂ ಸೇವಾ ಸಂಸ್ಥೆ ಉದ್ಘಾಟಿಸಿ ಅವರು ಮಾತನಾಡಿದರು.ಸೇವೆಗಾಗಿ ಅನೇಕ ಸಂಸ್ಥೆಗಳು ಹುಟ್ಟುತ್ತವೆ. ಆದರೆ, ಕೆಲವೇ ದಿನದಲ್ಲಿ ಅವುಗಳು ತಮ್ಮ ಆಸ್ತಿತ್ವ ಕಳೆದುಕೊಳ್ಳುತ್ತವೆ. ಇದಕ್ಕೆ ಅವಕಾಶ ನೀಡದೆ ಮತ್ತಷ್ಟು ಮಂದಿಗೆ ಪ್ರೇರಣೆ ನೀಡುವ ರೀತಿಯಲ್ಲಿ ಈ ಸಂಸ್ಥೆ ಬೆಳೆಯಲಿ ಎಂದು ಹಾರೈಸಿದರು.ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ವ್ಯಕ್ತಿಯ ಮನಸ್ಸಿನಲ್ಲಿ ಒಂದಲ್ಲ ಒಂದು ಹೊಸ ರೀತಿಯ ಯೋಚನೆ, ಯೋಜನೆ ಹೊಳೆಯುತ್ತದೆ. ಅದನ್ನು ಅರ್ಥಪೂರ್ಣವಾಗಿ ರೂಪಿಸುವುದೇ ನಿಜವಾದ ಸೇವೆ ಎಂದು ಅವರು ಬಣ್ಣಿಸಿದರು.ಜಿ. ಆನಂದಕುಮಾರ್ ಅಧ್ಯಕ್ಷತೆ ವಹಿಸಿದ್ದರು. `ಸೂಡಾ~ ಅಧ್ಯಕ್ಷ ದತ್ತಾತ್ರೀ, ಜಿ. ಧರ್ಮಪ್ರಸಾದ್, ಬಿ.ಕೆ. ಶ್ರೀನಾಥ್, ಸುರೇಶಪ್ಪ, ಪದ್ಮನಾರಾಯಣ, ಎಸ್.ಎಂ. ರಮೇಶ್, ಪ್ರಕಾಶ್, ಜಿ.ವಿ. ಹರಿಪ್ರಸಾದ್ ಉಪಸ್ಥಿತರಿದ್ದರು.ಶಾಂತ, ಶಕುಂತಲಾ ಪ್ರಾರ್ಥಿಸಿದರು, ಪ್ರಶಾಂತ ಸಣ್ಣಕ್ಕಿ ಕಾರ್ಯಕ್ರಮ ನಿರೂಪಿಸಿದರು, ಉದಯಕುಮಾರ್ ಸ್ವಾಗತಿಸಿದರು, ಜಿ. ಧರ್ಮಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಚಿಕಿತ್ಸೆ ನೇತೃತ್ವವನ್ನು  ಡಾ.ವೀಣಾಭಟ್, ಡಾ.ಆಶಾ ಧರ್ಮಪ್ರಸಾದ್ ವಹಿಸಿದ್ದರು. ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.