ಸೇವೆಯ ದೀಪ ಹಚ್ಚಲು ವಿದ್ಯಾರ್ಥಿಗಳಿಗೆ ಕರೆ

7

ಸೇವೆಯ ದೀಪ ಹಚ್ಚಲು ವಿದ್ಯಾರ್ಥಿಗಳಿಗೆ ಕರೆ

Published:
Updated:

ಹೊಳಲ್ಕೆರೆ: ವಿದ್ಯಾರ್ಥಿಗಳು ಮುಂದಿನ ವೃತ್ತಿ ಜೀವನದಲ್ಲಿ ಸೇವೆಯ ದೀಪ ಹಚ್ಚಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಹಾಗೂ ಆಡಳಿತಾಧಿಕಾರಿ ರಾಘವೇಂದ್ರ ಪಾಟೀಲ ಹೇಳಿದರು.ತಾಲ್ಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ರಾಘವೇಂದ್ರ ಬಿ.ಇಡಿ ಕಾಲೇಜಿನಲ್ಲಿ ಸೋಮವಾರ ನಡೆದ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಂದಿನ ಪೀಳಿಗೆಯನ್ನು ಜಾಗೃತಗೊಳಿಸುವ ಜವಾಬ್ದಾರಿ ಇಂದಿನ ಯುವ ಜನಾಂಗದ ಮೇಲೆ ಇದೆ.

ಸಮಾಜದಲ್ಲಿ ಉತ್ತಮ ಮತ್ತು ಸಮರ್ಥ ಪ್ರಜೆ ಆಗುವ ಮೂಲಕ ಇತರರಿಗೆ ಮಾದರಿಯಾಗಬೇಕು. ವಿದ್ಯಾರ್ಥಿ ಜೀವನದ ಅನುಭವಗಳನ್ನು ವೃತ್ತಿ ಜೀವನದಲ್ಲೂ ಅಳವಡಿಸಿಕೊಳ್ಳಬೇಕು. ಸತತ ಅಧ್ಯಯನ, ಪರಿಶ್ರಮ, ಸನ್ಮಾರ್ಗಗಳಿಂದ ಜೀವನದಲ್ಲಿ ಯಶಸ್ಸು ಕಾಣಬಹುದು. ದುಶ್ಚಟಗಳಿಗೆ ಅಂಟಿಕೊಳ್ಳದೆ ದೊಡ್ಡ ಸಾಧನೆ ಮಾಡುವತ್ತ ಗುರಿ ಹೊಂದಬೇಕು ಎಂದು ಸಲಹೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry