ಜಿನೀವಾ (ಪಿಟಿಐ): ಸ್ವಿಟ್ಜರ್ಲೆಂಡ್ ಗಡಿಗೆ ಸಮೀಪದಲ್ಲಿರುವ ಫ್ರಾನ್ಸ್‌ನ ಸ್ಕಾನ್‌ಜೈರ್‌ನಲ್ಲಿ ಭಾನುವಾರ ನಡೆದ ಅಪಘಾತದಲ್ಲಿ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಜಾನ್ ಕೆರ್ರಿ ಅವರು ಪರಮಾಣು ಕಾರ್ಯಕ್ರಮದ ಕುರಿತು ಇರಾನ್ ರಾಯಭಾರಿಗಳೊಂದಿಗೆ ಚರ್ಚಿಸಲು ಜಿನೀವಾಕ್ಕೆ ತೆರಳಿದ್ದರು. ಈ ವೇಳೆ ಸೈಕ್ಲಿಂಗ್ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅವರ ಬಲ ತೊಡೆಯ ಎಲುಬು ಮುರಿದು ಹೋಗಿದೆ.

‘ಕೆರ್ರಿ ಅವರನ್ನು ಜಿನೀವಾ ವಿಶ್ವವಿದ್ಯಾಲಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದಲ್ಲಿ ಸ್ಥಿರತೆ ಇದ್ದು, ಪ್ರಜ್ಞೆ ಕಳೆದುಕೊಂಡಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಮರಳಲಿದ್ದಾರೆ’ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.