ನವದೆಹಲಿ (ಐಎಎನ್ಎಸ್): ಲಂಡನ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಜಯಿಸಿ ಖುಷಿಯಲ್ಲಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ಗೆ ಈಗ ಮತ್ತೊಂದು ಸಂಭ್ರಮ. ಅವರೀಗ ವಿಶ್ವ ರ್ಯಾಂಕಿಂಗ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಹೈದರಾಬಾದ್ನ ಆಟಗಾರ್ತಿ ಈ ಮೊದಲು ಐದನೇ ರ್ಯಾಂಕ್ ಹೊಂದಿದ್ದರು. ಒಲಿಂಪಿಕ್ಸ್ನಲ್ಲಿ ಪದಕದ ಸಾಧನೆ ಮಾಡಿದ ನಂತರ ಅವರ ರ್ಯಾಂಕಿಂಗ್ನಲ್ಲಿ ಸುಧಾರಣೆ ಕಂಡಿದೆ. ಪುರುಷರ ವಿಭಾಗದ ಸಿಂಗಲ್ಸ್ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದ ಪಿ. ಕಶ್ಯಪ್ 19ನೇ ಸ್ಥಾನ ಪಡೆದಿದ್ದಾರೆ. ಇದು ಅವರ ವೃತ್ತಿ ಜೀವನದ ಶ್ರೇಷ್ಠ ಸಾಧನೆಯಾಗಿದೆ. ಈ ಮೊದಲು 21ನೇ ಸ್ಥಾನದಲ್ಲಿದ್ದರು.

ಮಹಿಳಾ ವಿಭಾಗದ ಡಬಲ್ಸ್ ಜೋಡಿ ಜ್ವಾಲಾ ಗುಟ್ಟಾ ಹಾಗೂ ಅಶ್ವಿನಿ ಪೊನ್ನಪ್ಪ 17ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. ಮೊದಲು 20ನೇ ಸ್ಥಾನ ಹೊಂದಿದ್ದರು. ಮಿಶ್ರ ಡಬಲ್ಸ್ ಜೋಡಿ ವಿ.ದಿಜು ಹಾಗೂ ಜ್ವಾಲಾ 13ನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.