ಸೋಮವಾರ, ಮೇ 23, 2022
27 °C

ಸೈನಿಕರ ಇಫ್ತಾರ್ ಕೂಟದ ಮೇಲೆ ದಾಳಿ: 14 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗ್ದಾದ್ (ಎಪಿ): ರಂಜಾನ್ ಆಚರಣೆಯ ಮೊದಲ ದಿನದ ಉಪವಾಸ ಅಂತ್ಯಗೊಳಿಸಿ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿರುವ ಉಗ್ರರು  14 ಸೈನಿಕರನ್ನು ಹತ್ಯೆ ಮಾಡಿದ್ದಾರೆ.ದೇಶದ ಪಶ್ಚಿಮ ಭಾಗದ ಅನ್ಬರ್ ಪ್ರಾಂತ್ಯದ ಬರ್ವಾನ ನಗರದಲ್ಲಿ ಗುರುವಾರ ಘಟನೆ ನಡೆದಿದೆ. ಮೊದಲಿಗೆ ಇಲ್ಲಿನ ಚೆಕ್‌ಪೋಸ್ಟ್ ಮೇಲೆ ದಾಳಿ ನಡೆಸಿ ಮೂವರನ್ನು ಕೊಂದ ಸೈನಿಕರು ನಂತರ, ಸಮೀಪದಲ್ಲೇ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದ ವಿಶೇಷ ಕೈಗಾರಿಕಾ ಪೊಲೀಸ್ ಪಡೆಯ (ಎಸ್‌ಐಪಿಬಿ) ಬೆಂಗಾವಲು  ವಾಹನದ ಮೇಲೆ ಗುಂಡಿನ ಮಳೆಗರೆದಿದ್ದಾರೆ. ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.