ಸೋಮವಾರ, ಏಪ್ರಿಲ್ 12, 2021
31 °C

ಸೈಬರ್ ಅಪರಾಧ: ನೆರವಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸೈಬರ್ ಅಪರಾಧಗಳ ತಡೆಗೆ ಮತ್ತು ತನಿಖಾ ಕಾರ್ಯಕ್ಕೆ ಇಂಟರ್‌ನೆಟ್ ಸೇವಾ ಸಂಸ್ಥೆಗಳು, ಸೈಬರ್ ಕೆಫೆಗಳು ಪೊಲೀಸ್ ಇಲಾಖೆಗೆ ಸೂಕ್ತ ನೆರವು ನೀಡಬೇಕು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಸ್.ಟಿ.ರಮೇಶ್ ಹೇಳಿದರು. ನಗರದ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಸೈಬರ್ ಭದ್ರತಾ ಶೃಂಗಸಭೆ ಎರಡನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ‘ಸೈಬರ್ ಅಪರಾಧಗಳಿಗೆ ಭೌಗೋಳಿಕವಾಗಿ ಗಡಿ ಇಲ್ಲ. ಆದ್ದರಿಂದ ಈ ಅಪರಾಧಗಳ ತನಿಖಾ ಕಾರ್ಯ ನಿಜಕ್ಕೂ ಕಷ್ಟದ ಕೆಲಸ’ ಎಂದರು.‘ಕಂಪ್ಯೂಟರ್. ಇಂಟರ್‌ನೆಟ್ ಬಳಕೆಯ ಬಗ್ಗೆ ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಅರಿವು ಮೂಡಿಸಬೇಕು’ ಎಂದರು.

ತಿರುವನಂತಪುರದಲ್ಲಿರುವ ಸುಧಾರಿತ ಗಣಕ ಅಭಿವೃದ್ಧಿ ಕೇಂದ್ರದ ಹೆಚ್ಚುವರಿ ನಿರ್ದೇಶಕ ಡಾ.ರಮಣಿ ಶ್ರೀನಿವಾಸನ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ನಿರ್ದೇಶಕ ಅರವಿಂದ ಜನ್ನು, ಕಿಯೋನಿಕ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಹರಿಕುಮಾರ್ ಝಾ, ರಾಜ್ಯದ ಪ್ರಧಾನ ಲೆಕ್ಕಪತ್ರ ಮಹಾನಿರ್ದೇಶಕ ಪ್ರಭು ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.