ಬುಧವಾರ, ಜನವರಿ 29, 2020
29 °C

ಸೈಲ್‌ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಲ್ಲಿಕಾರ್ಜುನ ಶಿಪ್ಪಿಂಗ್‌ ಕಂಪೆನಿ ವಿರುದ್ಧದ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್‌ ಸೈಲ್‌ ಸೇರಿದಂತೆ 18 ಜನರ ವಿರುದ್ಧ ಸಿಬಿಐ ಮಂಗಳವಾರ ಆರೋಪ ಪಟ್ಟಿ ಸಲ್ಲಿಸಿದೆ.ಬಳ್ಳಾರಿಯ ವಿವಿಧ ಸ್ಥಳಗಳಿಂದ 9 ಲಕ್ಷ ಟನ್‌ ಅದಿರನ್ನು ಅಕ್ರಮವಾಗಿ ತೆಗೆದು, ಮಲ್ಲಿಕಾರ್ಜುನ ಶಿಪ್ಪಿಂಗ್‌ ಕಂಪೆನಿ ರಫ್ತು ಮಾಡಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ.ಈ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)