ಗುರುವಾರ , ಮೇ 13, 2021
18 °C

ಸೊಲ್ಲಾಪುರ, ಮುಂಬೈ ಕರ್ನಾಟಕಕ್ಕೆ ಸೇರಲಿ: ಚಂದ್ರು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಮರಾಠಿಗರ ದಬ್ಬಾಳಿಕೆಯನ್ನು ತಡೆಯುವ ಉದ್ದೇಶದಿಂದ ಸೊಲ್ಲಾಪುರ ಮತ್ತು ಮುಂಬೈ ಮಹಾನಗರಗಳನ್ನು ಕರ್ನಾಟಕಕ್ಕೆ ಸೇರಿಸುವಂತೆ ಚಳವಳಿ ನಡೆಸುವ ಅಗತ್ಯವಿದೆ~ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಹೇಳಿದರು.ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿ ಮಹಾರಾಷ್ಟ್ರ ಶಾಸಕರು ಪ್ರತಿಭಟನೆ ನಡೆಸುತ್ತಿರುವ ಕುರಿತು ಇತ್ತೀಚೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, `ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು ಎಂದು ಮಹಾಜನ ಆಯೋಗದ ವರದಿ ಸ್ಪಷ್ಟವಾಗಿ ಹೇಳಿದೆ. ಮುಂಬೈನಲ್ಲಿ ಕನ್ನಡಿಗರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಎರಡೂ ನಗರಗಳನ್ನು ನಮ್ಮ ರಾಜ್ಯಕ್ಕೆ ಸೇರಿಸುವಂತೆ ಆಗ್ರಹಿಸಿ ಚಳವಳಿ ಆರಂಭಿಸುವ ಮೂಲಕ ಮರಾಠಿಗರಿಗೆ ನಾವು ಉತ್ತರ  ನೀಡಬೇಕು~ ಎಂದರು.`ಕನ್ನಡಿಗರು ಸೌಮ್ಯವಾಗಿ ಇರುವುದರಿಂದ ಮರಾಠಿಗರು ಪದೇ ಪದೇ ದೌರ್ಜನ್ಯ ನಡೆಸುತ್ತಾರೆ. ಅದನ್ನು ತಡೆಯಬೇಕಾದರೆ ಚಳವಳಿ ನಡೆಸಬೇಕು. ಕನ್ನಡ, ಕನ್ನಡಿಗರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಪತ್ರ ಬರೆಯುತ್ತೇನೆ~ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.