ಸೋನವಾನೆ ಲಂಚ ಕೇಳಿದ್ದರು
ಮುಂಬೈ: ಈ ವರ್ಷದ ಗಣರಾಜ್ಯೋತ್ಸವದಂದು ತೈಲ ಮಾಫಿಯಾಗೆ ಬಲಿಯಾದ ಹೆಚ್ಚುವರಿ ಜಿಲ್ಲಾಧಿಕಾರಿ ಯಶವಂತ್ ಸೋನವಾನೆ ಅವರು ದುಷ್ಕರ್ಮಿಗಳಿಂದ ಲಂಚ ಕೇಳಿದ್ದರು ಎಂದು ಸಿಬಿಐ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ನಾಸಿಕ್ನ ಜುಡಿಶಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಸೋಮವಾರ ತನಿಖಾ ತಂಡ 10 ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದೆ.
ಮಾಲೆಗಾಂವ್ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಸೋನವಾನೆ, ಕಲಬೆರಕೆ ಇಂಧನ ವಿತರಕ ಪೊಪಟ್ ಶಿಂಧೆ ಬಳಿ ಲಂಚ ಕೇಳಿದ್ದರು ಎಂದು ತನಿಖಾಧಿಕಾರಿಗಳು ಕೋರ್ಟ್ಗೆ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.